ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್: ಸೇನಾ ವಿಮಾನ ಅಪಘಾತ, ಇಬ್ಬರು ಪೈಲಟ್ ಸಾವು

Published 4 ಡಿಸೆಂಬರ್ 2023, 8:09 IST
Last Updated 4 ಡಿಸೆಂಬರ್ 2023, 8:09 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಸೇನೆಯ ತರಬೇತಿ ವಿಮಾನವೊಂದು ಹೈದರಾಬಾದ್‌ ಬಳಿ ಇಂದು (ಸೋಮವಾರ) ಬೆಳಿಗ್ಗೆ ಪತನಗೊಂಡಿದ್ದು, ಅದರಲ್ಲಿದ್ದ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.

ತೆಲಂಗಾಣದ ಮೇದಕ್ ಜಿಲ್ಲೆಯ ತೂಪ್ರಾನ್ ಮಂಡಲದಲ್ಲಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇಂದು ಬೆಳಿಗ್ಗೆ ಹೈದರಾಬಾದ್‌ನ ಏರ್‌ಫೋರ್ಸ್ ಅಕಾಡೆಮಿಯ ‘ಒನ್‌ ಪಿಲಾಟಸ್ ಪಿಸಿ 7 ಎಂಕೆ ಐಎಲ್’ ತರಬೇತಿ ವಿಮಾನವು ಅಪಘಾತಕ್ಕೀಡಾಗಿದೆ ಎಂದು ಐಎಎಫ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT