ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಬಿಯರ್ ಸೇವಿಸಿ ಇಬ್ಬರು ಎಸ್‌ಎಎಫ್ ಕಾನ್‌ಸ್ಟೆಬಲ್‌ ಸಾವು

Published 26 ಮೇ 2024, 10:49 IST
Last Updated 26 ಮೇ 2024, 10:49 IST
ಅಕ್ಷರ ಗಾತ್ರ

ಛಿಂದ್ವಾರ: ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ವಿಶೇಷ ಸಶಸ್ತ್ರ ಪಡೆಯ (ಎಸ್‌ಎಎಫ್) ಇಬ್ಬರು ಸಿಬ್ಬಂದಿ ಮದ್ಯ ಸೇವಿಸಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಎಸ್‌ಎಎಫ್‌ನ 8ನೇ ಬೆಟಾಲಿಯನ್‌ನ ಕಾನ್‌ಸ್ಟೆಬಲ್‌ಗಳಾದ ದಾನಿರಾಮ್ ಉಯ್ಕೆ (55) ಮತ್ತು ಪ್ರೇಮಲಾಲ್ ಕಕೋಡಿಯಾ (50) ಎಂದು ಗುರುತಿಸಲಾಗಿದೆ.

ದಾನಿರಾಮ್ ಹಾಗೂ ಪ್ರೇಮಲಾಲ್ ಇಬ್ಬರು ಒಟ್ಟಿಗೆ ಶನಿವಾರ ರಾತ್ರಿ ಬಿಯರ್ ಸೇವಿಸಿದ್ದರು. ಸ್ಪಲ್ಪ ಸಮಯದ ಬಳಿಕ ವಾಂತಿ ಮಾಡಿಕೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿರುವುದಾಗಿ ಪೊಲೀಸ್ ಅಧಿಕಾರಿ ಉಮೇಶ್ ಗೋಲ್ಹಾನಿ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT