ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ ಉದ್ರಿಕ್ತರು–ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ: ಇಬ್ಬರು ಸಿಬ್ಬಂದಿಗೆ ಗಾಯ

Published 28 ಜುಲೈ 2023, 7:13 IST
Last Updated 28 ಜುಲೈ 2023, 7:13 IST
ಅಕ್ಷರ ಗಾತ್ರ

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.

ರಾಜಧಾನಿ ಇಂಫಾಲದಿಂದ 50 ಕಿ.ಮೀ ದೂರದಲ್ಲಿ ಘಟನೆ ನಡೆದಿದೆ. ಗುರುವಾರ ಬೆಳಿಗ್ಗೆ ಆರಂಭವಾದ ಗುಂಡಿನ ದಾಳಿ ಶುಕ್ರವಾರ ಬೆಳಗಿನ ಜಾವದವರೆಗೂ ಮುಂದುವರೆದಿತ್ತು. ಘಟನೆಯಲ್ಲಿ ಜನರಿಲ್ಲದೆ ಖಾಲಿ ಇದ್ದ ಮನೆಯೊಂದಕ್ಕೆ ಬೆಂಕಿ ಬಿದ್ದಿದ್ದು ಸಂಪೂರ್ಣವಾಗಿ ಸುಟ್ಟುಹೋಗಿದೆ. 

ಘಟನೆ ನಡೆದ ಸುತ್ತಲಿನ ಪ್ರದೇಶಗಳಲ್ಲಿ ಡ್ರೋನ್‌ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ದುಷ್ಕರ್ಮಿಗಳು ಗಾಯಗೊಂಡಿದ್ದಾರೆಯೇ ಎನ್ನುವ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಮೈತೇಯಿ ಮತ್ತು ಕುಕಿ ಸಮುದಾಯದ ನಡುವಿನ ಸಂಘರ್ಷ ಹಲವು ಅಹಿತಕರ ಘಟನೆಗಳಿಗೂ ಕಾರಣವಾಗಿದ್ದು, ಈವರೆಗೆ 160ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT