ಶ್ರೀನಗರ: ಈಚೆಗೆ ನಿಧನರಾದ ಪ್ರತ್ಯೇಕತಾವಾದಿ ನಾಯಕ ಮೊಹಮ್ಮದ್ ಅಶ್ರಫ್ ಸೆಹ್ರಾಯ್ ಅವರ ಇಬ್ಬರು ಪುತ್ರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಸೆಹ್ರಾಯ್ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಸ್ವಾತಂತ್ರ್ಯ ಪರ ಘೋಷಣೆ ಕೂಗಿದ್ದ ಆರೋಪದಲ್ಲಿ ಇವರ ವಿರುದ್ಧ ಕುಪ್ವಾರ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬರ್ಜುಲ್ಲಾ ಪ್ರದೇಶದಲ್ಲಿರುವ ಅವರ ಮನೆಯಿಂದ ಶನಿವಾರ ಸಂಜೆ ವಶಕ್ಕೆ ಪಡೆಯಲಾಗಿದೆ ಎಂದೂ ತಿಳಿಸಿದ್ದಾರೆ.

ತೆಹ್ರೀಕ್ ಇ ಹುರಿಯತ್ (ಟಿಇಎಚ್) ಅಧ್ಯಕ್ಷರಾಗಿದ್ದ ಸೆಹ್ರಾಯ್ ಅವರನ್ನು ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿ ಬಂಧಿಸಲಾಗಿತ್ತು. ಉಧಂಪುರ ಜೈಲಿನಲ್ಲಿದ್ದ ಅವರನ್ನು ಅನಾರೋಗ್ಯದ ಕಾರಣ ಜಮ್ಮುವಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮೇ 5ರಂದು ನಿಧನರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.