ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ, ಯೋಧರಿಗೆ ಗಾಯ

Published 26 ಏಪ್ರಿಲ್ 2024, 6:53 IST
Last Updated 26 ಏಪ್ರಿಲ್ 2024, 6:53 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಎರಡನೇ ದಿನವೂ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, ಇಂದು (ಶುಕ್ರವಾರ) ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ನೌಪೋರಾದಲ್ಲಿ ಗುರುವಾರ ಕಾರ್ಯಾಚರಣೆ ನಡೆಸಲಾಗಿತ್ತು. ಇಂದು ಮುಂಜಾನೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ಹೇಳಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಗಾಯಗೊಂಡ ಇಬ್ಬರು ಸೇನಾ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಪೋರ್ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT