ನೋಯ್ಡಾ : ಪ್ರವಾಹದ ನಡುವೆಯೂ ಭಾನುವಾರ ಸ್ನಾನಕ್ಕೆಂದು ಯಮುನಾ ನದಿ ತೀರಕ್ಕೆ ತೆರಳಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ.

ಕಾಣೆಯಾದವರನ್ನು ಧನಕೌರ್ ಪೊಲೀಸ್ ಠಾಣಾ ವ್ಯಾಪ್ತಿಯ ಮಕಾನಪುರ ಖಾದರ್ ಗ್ರಾಮದ ಧೀರಜ್ (21) ಸಂಜಿತ್(17) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಪ್ರವಾಹ ಪೀಡಿತ ಯಮುನಾ ತೀರಕ್ಕೆ ಯುವಕರು ಸ್ನಾನಕ್ಕೆಂದು ತೆರಳಿದ್ದರು. ದಂಡೆಯ ಮೇಲೆ ಅವರ ಫೋನ್ ಮತ್ತು ಬಟ್ಟೆಗಳು ದೊರೆತಿವೆ ಆದರೆ ಯುವಕರು ನಾಪತ್ತೆಯಾಗಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಮತ್ತು ಸ್ಥಳೀಯ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಕಾನಪುರ ಖಾದರ್ ಪ್ರದೇಶ ಯುಮುನೆಯ ಪ್ರವಾಹಕ್ಕೆ ಸಿಲುಕಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾಗಿದೆ.

ದೆಹಲಿಯಲ್ಲಿ ಉಂಟಾದ ಪ್ರವಾಹದಲ್ಲಿ 7,200ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದು. 6 ಸಾವಿರ ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.