ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

Published 6 ಫೆಬ್ರುವರಿ 2024, 7:43 IST
Last Updated 6 ಫೆಬ್ರುವರಿ 2024, 7:43 IST
ಅಕ್ಷರ ಗಾತ್ರ

ಡೆಹರಾಡೂನ್: 'ಏಕರೂಪ ನಾಗರಿಕ ಸಂಹಿತೆ ಮಸೂದೆ'(UCC)ಯನ್ನು ಮಂಗಳವಾರ ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಈ ಮಸೂದೆಯಡಿ ವಿವಾಹ, ವಿಚ್ಛೇದನ, ಆಸ್ತಿ, ಉತ್ತರಾಧಿಕಾರ, ದತ್ತು ಸ್ವೀಕಾರ ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲಾ ಧಾರ್ಮಿಕ ಸಮುದಾಯಗಳಿಗೆ ಒಂದೇ ಕಾನೂನು ಅನ್ವಯವಾಗಲಿದೆ.

ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಸದನದಲ್ಲಿ ಏಕರೂಪ ನಾಗರಿಕ ಸಂಹಿತೆ ವಿಧೇಯಕವನ್ನು ಮಂಡಿಸಿದರು.

ಯುಸಿಸಿ ಮಸೂದೆಯ ಮಂಡನೆಯನ್ನು ಜೈ ಶ್ರೀ ರಾಮ್ ಮತ್ತು ವಂದೇ ಮಾತರಂ ಘೋಷಣೆಗಳೊಂದಿಗೆ ಸ್ವಾಗತಿಸಲಾಯಿತು. ಅಂಗೀಕಾರಕ್ಕೂ ಮುನ್ನ ಮಸೂದೆ ವಿಧಾನಸಭೆಯಲ್ಲಿ ಚರ್ಚೆಯಾಗಲಿದೆ.

ವಿಧಾನಸಭೆಯಲ್ಲಿ ಈ ಮಸೂದೆ ಅಂಗೀಕಾರವಾದರೆ ಉತ್ತರಾಖಂಡ ರಾಜ್ಯವು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಜಾರಿಗೊಳಿಸಿದ ದೇಶದ ಮೊದಲ ರಾಜ್ಯವಾಗಲಿದೆ.

ಮಸೂದೆ ಮಂಡನೆಗೂ ಮುನ್ನ ಸದನದೊಳಗೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ್ದು, ಅದರ ನಿಬಂಧನೆಗಳನ್ನು ಅಧ್ಯಯನ ಮಾಡಲು ಸಮಯ ನೀಡಿಲ್ಲ ಎಂದು ದೂರಿದ್ದಾರೆ.

‌ಶಾಸಕಾಂಗದ ಸಂಪ್ರದಾಯಗಳನ್ನು ಉಲ್ಲಂಘಿಸಿ ಚರ್ಚೆಯಿಲ್ಲದೆ ಮಸೂದೆಯನ್ನು ಅಂಗೀಕರಿಸಲು ಸರ್ಕಾರ ಬಯಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಯಶಪಾಲ್ ಆರ್ಯ ಹೇಳಿದ್ದಾರೆ.

ವಿಧೇಯಕವನ್ನು ಅಧ್ಯಯನ ಮಾಡಲು ಸಾಕಷ್ಟು ಸಮಯಾವಕಾಶ ನೀಡುವುದಾಗಿ ಸ್ಪೀಕರ್ ರಿತು ಖಂಡೂರಿ ಭರವಸೆ ನೀಡಿದರೂ ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಿದ್ದಾರೆ.

ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನ ನಡೆಯುತ್ತಿದೆ. ವಿಶೇಷವಾಗಿ ಏಕರೂಪ ನಾಗರಿಕ ಸಂಹಿತೆ ಮಸೂದೆಯ ಅಂಗೀಕಾರಕ್ಕಾಗಿಯೇ ಈ ಅಧಿವೇಶನ ಕರೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT