ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಸಿಸಿ ಕರಡು ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಅಸ್ತು

Published 4 ಫೆಬ್ರುವರಿ 2024, 16:26 IST
Last Updated 4 ಫೆಬ್ರುವರಿ 2024, 16:26 IST
ಅಕ್ಷರ ಗಾತ್ರ

ಡೆಹ್ರಾಡೂನ್: ಏಕರೂಪ ನಾಗರಿಕ ಸಂಹಿತೆಯ(ಯುಸಿಸಿ) ಅಂತಿಮ ಕರಡು ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಈ ಮೂಲಕ ನಾಳೆಯಿಂದ ಆರಂಭವಾಗಲಿರುವ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಮಸೂದೆ ಮಂಡನೆ ನಿಶ್ಚಿತವಾಗಿದೆ.

ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸುವ ಮುನ್ನ ಸಚಿವ ಸಂಪುಟದ ಅಂಗೀಕಾರ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ಅಧಿಕೃತ ನಿವಾಸದಲ್ಲೇ ಭಾನುವಾರ ಸಚಿವ ಸಂಪುಟ ಸಭೆ ನಡೆಯಿತು.

ಯುಸಿಸಿ ಕುರಿತಾದ ಮಸೂದೆಯನ್ನು ಮಂಡಿಸಿ ಜಾರಿಗೆ ತರುವ ನಿಟ್ಟಿನಲ್ಲಿ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದೆ. ಈ ಅಧಿವೇಶನದಲ್ಲಿ ಯುಸಿಸಿ ಜಾರಿಯಾದರೆ, ಸ್ವಾತಂತ್ರ್ಯಾನಂತರ ದೇಶದಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರಾಖಂಡವಾಗಲಿದೆ.

2022ರ ವಿಧಾನಸಭೆ ಚುನಾವಣೆಯ ಸಂದರ್ಭ ಧಾಮಿ ನೀಡಿದ್ದ ಭರವಸೆಗಳಲ್ಲಿ ಯುಸಿಸಿ ಜಾರಿಯು ಪ್ರಮುಖವಾಗಿತ್ತು.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ 5 ಸದಸ್ಯರ ಆಯೋಗವು ಇತ್ತೀಚೆಗೆ ಯುಸಿಸಿಯ ಅಂತಿಮ ಕರಡು ಮಸೂದೆಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT