ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯುಸಿಸಿ ಜಾರಿ ಸರ್ಕಾರದ ಕಾರ್ಯಸೂಚಿಯ ಭಾಗ: ಸಚಿವ ಅರ್ಜುನ್‌ ರಾಮ್ ಮೇಘವಾಲ್‌

Published 11 ಜೂನ್ 2024, 20:04 IST
Last Updated 11 ಜೂನ್ 2024, 20:04 IST
ಅಕ್ಷರ ಗಾತ್ರ

ನವದೆಹಲಿ: ‘ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸುವುದು ಕೇಂದ್ರ ಸರ್ಕಾರದ ಕಾರ್ಯಸೂಚಿಯ ಭಾಗವಾಗಿದೆ’ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್‌ ಮಂಗಳವಾರ ಹೇಳಿದರು.

ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ಗೆ ನ್ಯಾಯಮೂರ್ತಿಗಳ ನೇಮಕ, ಬಡ್ತಿ, ವರ್ಗಾವಣೆ ಕುರಿತಂತೆ ಅನುಸರಿಸಬೇಕಾದ ಪ್ರಕ್ರಿಯೆ ಕುರಿತಂತೆ ಸೂಕ್ತ ಪರಿಹಾರೋಪಾಯ ಕಂಡುಕೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಕಾನೂನು ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ತಿಕ್ಕಾಟ ನಡೆದಿದೆ ಎಂಬ ಅಭಿಪ್ರಾಯಗಳನ್ನು ತಳ್ಳಿಹಾಕಿದರು.

ಒಂದು ರಾಷ್ಟ್ರ, ಒಂದೇ ಚುನಾವಣೆ ವಿಷಯ ಕುರಿತ ಪ್ರಶ್ನೆಗೆ, ಮಾಜಿ ರಾಷ್ಟ್ರಪತಿ ನೇತೃತ್ವದ ಸಮಿತಿ ವರದಿ ಸಲ್ಲಿಸಿದೆ. ಕಾನೂನು ಆಯೋಗವೂ ಈ ವಿಷಯವನ್ನು ಪರಿಶೀಲಿಸುತ್ತಿದೆ. ಈ ಕುರಿತು ನಂತರ ತಿಳಿಸಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT