31 ವರ್ಷ ವಯಸ್ಸಿನ ಫರ್ಹಾದ್ ಮೊಹಮ್ಮದ್ ಶೇಖ್ನನ್ನು 7ನೇ ಆರೋಪಿ ಎಂದು ಗುರುತಿಸಲಾಗಿದೆ. ಈತ ಪ್ರಮುಖ ಆರೋಪಿ ರಿಯಾಜ್ ಅತ್ತಾರಿಯ ಸಹಚರನೆಂದು ಎನ್ಐಎ ಮಾಹಿತಿ ನೀಡಿದೆ.
ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವ್ಯಕ್ತಿಯ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿತ್ತು.