ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್‌: ಉದ್ಘಾಟನೆಗೆ ರಾಷ್ಟ್ರಪತಿ ಕರೆಯದಿರುವುದು ಸನಾತನ ಧರ್ಮದ ತಾರತಮ್ಯ–ಉದಯನಿಧಿ

Published 6 ಸೆಪ್ಟೆಂಬರ್ 2023, 6:20 IST
Last Updated 6 ಸೆಪ್ಟೆಂಬರ್ 2023, 6:20 IST
ಅಕ್ಷರ ಗಾತ್ರ

ಚೆನ್ನೈ: ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದೇ ಸನಾತನ ಧರ್ಮದ ಜಾತಿ ವ್ಯವಸ್ಥೆಯಲ್ಲಿರುವ ತಾರತಮ್ಯಕ್ಕೆ ಉದಾಹರಣೆ ಎಂದು ತಮಿಳುನಾಡು ಮಂತ್ರಿ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಸನಾತನ ಧರ್ಮವನ್ನು ಡೆಂಗಿ ಹಾಗೂ ಮಲೇರಿಯಾಗೆ ಹೋಲಿಸಿ, ಅದರ ನಿರ್ಮೂಲನೆಗೆ ಕರೆ ನೀಡಿದ್ದ ಸ್ಟಾಲಿನ್ ಹೇಳಿಕೆ ಈಗ ದೇಶವ್ಯಾಪಿ ಚರ್ಚೆಗೆ ಕಾರಣವಾಗಿದೆ. ಉತ್ತರ ಪ್ರದೇಶದಲ್ಲಿ ಇವರ ವಿರುದ್ಧ ಹಾಗೂ ಸ್ಟಾಲಿನ್ ಹೇಳಿಕೆ ಬೆಂಬಲಿಸಿದ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡಿರುವ ಉದಯನಿಧಿ, ಯಾವುದೇ ಬೆದರಿಕೆಯನ್ನು ಎದುರಿಸಲು ಸಿದ್ಧ ಎಂದಿದ್ದಾರೆ. ಸನಾತನ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದಾಗಿ ಮನುಷ್ಯರ ನಡುವಿನ ತಾರತಮ್ಯಕ್ಕೆ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಿಂದ ಈಗಿನ ರಾಷ್ಟ್ರಪತಿ ಅವರನ್ನು ದೂರ ಇಟ್ಟಿರುವುದೇ ಸಾಕ್ಷಿ ಎಂದಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಉದಯನಿಧಿ ಅವರ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ. ಇದೇ ವಿಷಯವಾಗಿ ಉದಯನಿಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರನ್ನು ಆಗ್ರಹಿಸಿರುವುದಾಗಿ ಸುಬ್ರಮಣಿಯನ್ ಸ್ವಾಮಿ ತಮ್ಮ ಎಕ್ಸ್‌ ಖಾತೆಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT