ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಹುಲ್‌ ಪಾಲ್ಗೊಂಡಿದ್ದ ಸಭೆಗೆ ಉದ್ಧವ್‌ ಗೈರು

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದ ಸಾರ್ವಜನಿಕ ಸಭೆ
Published : 5 ಸೆಪ್ಟೆಂಬರ್ 2024, 16:00 IST
Last Updated : 5 ಸೆಪ್ಟೆಂಬರ್ 2024, 16:00 IST
ಫಾಲೋ ಮಾಡಿ
Comments

ಸಾಂಗ್ಲಿ (ಮಹಾರಾಷ್ಟ್ರ): ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪಾಲ್ಗೊಂಡಿದ್ದ ಸಾಂಗ್ಲಿ ಜಿಲ್ಲೆಯ ಸಾರ್ವಜನಿಕ ಸಭೆಗೆ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ ಗೈರು ಹಾಜರಾಗಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್‌ ಪವಾರ್‌, ರಾಜ್ಯ ಘಟಕದ ಅಧ್ಯಕ್ಷ ಜಯಂತ್ ಪಾಟೀಲ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕರು ಸಾಂಗ್ಲಿ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್‌ ಠಾಕ್ರೆ ಮತ್ತು ಅವರ ಪಕ್ಷದ ಯಾವೊಬ್ಬ ನಾಯಕರೂ ಭಾಗಿಯಾಗಲಿರಲಿಲ್ಲ.

ಚುನಾವಣೆಗೂ ಮುನ್ನ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಿಸುವಂತೆ ಉದ್ಧವ್‌ ಅವರು ಕೆಲ ದಿನಗಳ ಹಿಂದೆ ಕಾಂಗ್ರೆಸ್‌ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕರನ್ನು ಒತ್ತಾಯಿಸಿದ್ದರು.

ಈ ಕುರಿತು ಬುಧವಾರ ಪ್ರತಿಕ್ರಿಯಿಸಿದ್ದ ಶರದ್‌ ಪವಾರ್‌, ‘ಚುನಾವಣೆಯ ಬಳಿಕ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಸೂಕ್ತ. ಮೈತ್ರಿ ಪಕ್ಷಗಳ ಪೈಕಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆಯೋ ಆ ಪಕ್ಷದವರು ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಸಾಧ್ಯತೆಯಿದೆ’ ಎಂದು ಹೇಳಿದ್ದರು.

ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT