ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ED ವಿಚಾರಣೆ ಎದುರಿಸುತ್ತಿರುವ ಠಾಕ್ರೆ ಆಪ್ತ ಶಾಸಕ, ಸಿಎಂ ಶಿಂದೆ ಬಣಕ್ಕೆ ಸೇರ್ಪಡೆ

Published 11 ಮಾರ್ಚ್ 2024, 3:09 IST
Last Updated 11 ಮಾರ್ಚ್ 2024, 3:09 IST
ಅಕ್ಷರ ಗಾತ್ರ

ಮುಂಬೈ: ಸಾರ್ವಜನಿಕ ಸ್ಥಳದಲ್ಲಿ ಐಷಾರಾಮಿ ಹೋಟೆಲ್‌ ನಿರ್ಮಿಸಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸುತ್ತಿರುವ ಶಿವಸೇನೆಯ ಉದ್ಧವ್‌ ಠಾಕ್ರೆ ಬಣದ (ಯುಬಿಟಿ) ಶಾಸಕ ರವೀಂದ್ರ ವೇಕರ್‌ ಅವರು ಭಾನುವಾರ, ಮುಖ್ಯಮಂತ್ರಿ ಏಕನಾಥ ಶಿಂದೆ ಬಣ ಸೇರಿದ್ದಾರೆ.

ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ಆಪ್ತರಾಗಿದ್ದ ರವೀಂದ್ರ,  ಮುಂಬೈನ ಜೋಗೇಶ್ವರಿ ಪೂರ್ವ ಕ್ಷೇತ್ರದ ಶಾಸಕ. ಅವರು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಟಿಕೆಟ್‌ ವಿಚಾರವಾಗಿ ಒಂದು ದಿನದ ಹಿಂದಷ್ಟೇ ನಡೆದ ಸಭೆಯಲ್ಲಿ ಠಾಕ್ರೆ ಅವರೊಂದಿಗೆ ಪಾಲ್ಗೊಂಡಿದ್ದರು.

ರವೀಂದ್ರ ಅವರು, ಮಲಬಾರ್ ಹಿಲ್‌ನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸ 'ವರ್ಷಾ'ದಲ್ಲಿ ಶಿವಸೇನಾಗೆ ಸೇರ್ಪಡೆಯಾದರು. ಬಳಿಕ ಮಾತನಾಡಿದ ಅವರು, ಶಿವಸೇನಾದೊಂದಿಗೆ ಕಳೆದ 50 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಶಿಂದೆ ಬಣ ಸೇರಿದ್ದೇನೆ ಎಂದು ಹೇಳಿದ್ದಾರೆ.

ಜೋಗೇಶ್ವರಿ ಹಾಗೂ ವಿಖ್ರೋಲಿ ನಡುವೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕ್ರೀಡೆ ಹಾಗೂ ಮನರಂಜನಾ ಉದ್ದೇಶಕ್ಕಾಗಿ ಮೀಸಲಿರಿಸಿದ್ದ ಜಾಗದಲ್ಲಿ ಐಷಾರಾಮಿ ಹೋಟೆಲ್‌ ನಿರ್ಮಿಸಿದ ಆರೋಪ ರವೀಂದ್ರ ಅವರ ಮೇಲಿದೆ. ಈ ಸಂಬಂಧ ಇ.ಡಿ ವಿಚಾರಣೆ ನಡೆಸುತ್ತಿದೆ.

ಸಾರ್ವಜನಿಕ ಬಳಕೆಯ ಉದ್ದೇಶಕ್ಕಾಗಿ ಜಾಗವನ್ನು ರವೀಂದ್ರ ಹಾಗೂ ಇತರರಿಗೆ ನಿಯೋಜಿಸಲಾಗಿತ್ತು. ಆದರೆ, ಹಣ ಮಾಡುವ ಉದ್ದೇಶದಿಂದ ಇಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಲು, ಮುಂಬೈ ಮಹಾನಗರ ಪಾಲಿಕೆಗೆ ಸುಳ್ಳು ಮಾಹಿತಿ ನೀಡಿ 2021ರಲ್ಲಿ ಅನುಮತಿ ಪಡೆದಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT