ಕೊಚ್ಚಿ(ಕೇರಳ): ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಬಡ್ಡಿ ರಹಿತ ಸಾಲ ಸೇರಿದಂತೆ ಹಲವು ಭರವಸೆಗಳನ್ನು ಇಂದು(ಗುರುವಾರ) ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ನೀಡಿದೆ.

ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್, ಕೇರಳದ ಪ್ರತಿ ಕುಟುಂಬಕ್ಕೆ ₹25 ಲಕ್ಷ ವಿಮಾ ಯೋಜನೆಯನ್ನು ಒದಗಿಸಲಾಗುವುದು ಮತ್ತು ಸಣ್ಣ ಉದ್ಯಮಗಳಿಗೆ ₹5 ಲಕ್ಷ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ.

‘ಕೇರಳ ರಾಜ್ಯ ಸಾರಿಗೆಯ ಎಲ್ಲಾ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಕಲ್ಯಾಣ ಪಿಂಚಣಿ ಮಾಸಿಕ ₹3 ಸಾವಿರ ಏರಿಕೆ, ಕಾಲೇಜು ವಿದ್ಯಾರ್ಥಿನಿಯರಿಗೆ ಮಾಸಿಕ ₹1 ಸಾವಿರ ಸಹಾಯಧನ ನೀಡಲಾಗುವುದು’ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ವಿಮಾನಯಾನ ಕ್ಷೇತ್ರದ ಅಭಿವೃದ್ಧಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ, ₹100 ಕೋಟಿ ವಹಿವಾಟು ಹೊಂದಿರುವ ಸಣ್ಣ ಉದ್ಯಮಗಳಿಗೆ ಹಣಕಾಸಿನ ನೆರವು ಮತ್ತು ವಯನಾಡಿನಲ್ಲಿ ಬುಡಕಟ್ಟು ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.

ಕೇರಳ ವಿಧಾನಸಭೆಗೆ ಏ.9ರಂದು ಮತದಾನ ನಡೆಯಲಿದೆ. ಮೇ.4ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.