ಗೋಬಿಚೆಟ್ಟಿಪಾಳ್ಯಂ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಆರೋಪಿಸಿದ್ದಾರೆ.

ಪಶ್ಚಿಮ ಈರೋಡ್ ಜಿಲ್ಲೆಯ ಗೋಬಿಚೆಟ್ಟಿಪಾಳ್ಯಂನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರಕ್ಕೆ ನೀಡಬೇಕಿದ್ದ ₹3 ಸಾವಿರ ಕೋಟಿಯನ್ನು ಕೇಂದ್ರ ತಡೆಹಿಡಿದಿದೆ. ಆ ಮೂಲಕ ನಮ್ಮ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, ‘ಡಿಎಂಕೆ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಸ್ತುತ ಇರುವ ‘ಕಲೈಂಜರ್ ಮಗಳಿರ್ ಉರಿಮೈ ತೊಗೈ’ ಯೋಜನೆಯಡಿ ಮಹಿಳೆಯರಿಗೆ ನೀಡುತ್ತಿರುವ ಧನಸಹಾಯವನ್ನು ₹2 ಸಾವಿರಕ್ಕೆ ಹೆಚ್ಚಿಸಲಾಗುವುದು. ಅದೇ ರೀತಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಉಪಹಾರ ಯೋಜನೆಯನ್ನು 8ನೇ ತರಗತಿಯವರೆಗೆ ವಿಸ್ತರಿಸಲಾಗುವುದು ಮತ್ತು 35 ಲಕ್ಷಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ನೀಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.

ತಮಿಳುನಾಡಿನ 234 ವಿಧಾನಸಭಾ ಸ್ಥಾನಗಳಿಗೆ ಏ. 23 ರಂದು ಚುನಾವಣೆ ನಡೆಯಲಿದ್ದು, ಮೇ. 4 ರಂದು ಫಲಿತಾಂಶ ಪ್ರಕಟವಾಗಲಿದೆ.

‘ಇಂಡಿಯಾ’ಕ್ಕೆ ಸಂದ ದೊಡ್ಡ ಜಯ:

ಸಂವಿಧಾನ ತಿದ್ದುಪಡಿ ಮಸೂದೆಗೆ ಸೋಲಾಗಿರುವ ಕುರಿತು ಮಾತನಾಡಿದ ಅವರು, ‘ಮಸೂದೆ ವಿರುದ್ಧ ದೇಶದಲ್ಲೇ ಮೊದಲ ಬಾರಿಗೆ ಧ್ವನಿ ಎತ್ತಿದ ವ್ಯಕ್ತಿ ಎಂದರೆ ಎಂ.ಕೆ. ಸ್ಟಾಲಿನ್. ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಮಸೂದೆಯ ವಿರುದ್ಧ ಮತ ಚಲಾಯಿಸಿದ್ದು, ಬಹುಮತದ ಕೊರತೆಯಿಂದ ಮಸೂದೆ ಸೋತಿದೆ. ಇದು 'ಇಂಡಿಯಾ' ಮೈತ್ರಿಕೂಟಕ್ಕೆ ಸಂದ ದೊಡ್ಡ ಜಯ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.