ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಸನಾತನ ಧರ್ಮ ನಾಶಗೊಳಿಸಬೇಕು ಎಂಬ ವಿವಾದತ್ಮಾಕ ಹೇಳಿಕೆ ಕುರಿತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಸ್ಪಷ್ಟನೆ ನೀಡಿದ್ದಾರೆ.

'ಜನರನ್ನು ಮೇಲ್ಜಾತಿ, ಕೆಳಜಾತಿಗಳೆಂದು ವಿಭಜಿಸುವ ಜಾತಿ ಪದ್ಧತಿಯನ್ನು ನಿರ್ಮೂಲನೆ ಮಾಡಬೇಕು ಎಂಬ ಉದ್ದೇಶವನ್ನಷ್ಟೇ ಹೊಂದಿದ್ದೆ' ಎಂದು ಪ್ರತಿಕ್ರಿಯಿಸಿದ್ದಾರೆ.

'ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡುವುದು ಅಂದರೆ ಯಾರೂ ದೇವಸ್ಥಾನಕ್ಕೆ ಹೋಗಬಾರದು ಎಂದಲ್ಲ. ದೇವಾಲಯದಲ್ಲಿ ಮಾತ್ರವಲ್ಲದೆ ಸಮಾಜದಲ್ಲಿಯೂ ಎಲ್ಲರಿಗೂ ಸಮಾನ ಹಕ್ಕುಗಳಿರಬೇಕು' ಎಂದು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

'ತಮಿಳುನಾಡು ವಿಧಾನಸಭೆಯಲ್ಲಿ ಭಾಷಣ ವೇಳೆ ಜನರನ್ನು ವಿಭಜಿಸುವ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದೆ. ಕೆಲವರು ನನ್ನನ್ನು ಟೀಕಿಸಿದ್ದಾರೆ. ಆದರೆ ನಾನು ಭಯಪಡುವ ವ್ಯಕ್ತಿಯಲ್ಲ. ಹೋರಾಟದಿಂದಲೇ ದ್ರಾವಿಡ ಚಳವಳಿ ಹೊರಹೊಮ್ಮಿದೆ. ಹಾಗಾಗಿ ಈ ಕುರಿತು ವಿವರಣೆ ನೀಡಲು ಬಯಸುತ್ತೇನೆ' ಎಂದಿದ್ದಾರೆ.

'ಪೆರಿಯಾರ್, ಅಂಬೇಡ್ಕರ್, ಅಣ್ಣಾ ಹೇಳಿದ ತತ್ವಗಳ ಬಗ್ಗೆಯೂ ನಾನು ಮಾತನಾಡಿದ್ದೇನೆ. ದೇವರಲ್ಲಿ ನಂಬಿಕೆಗೆ ನಾವು ವಿರೋಧಿಗಳಲ್ಲ. ಆದರೆ ಅಸಮಾನತೆ ಹಾಗೂ ದಬ್ಬಾಳಿಕೆಯನ್ನು ಬಲವಾಗಿ ವಿರೋಧಿಸುತ್ತೇವೆ' ಎಂದು ಹೇಳಿದ್ದಾರೆ.
.ಸನಾತನ ಧರ್ಮ ಜನರನ್ನು ವಿಭಜಿಸುತ್ತದೆ, ಅದನ್ನು ನಿರ್ಮೂಲನೆ ಮಾಡಬೇಕು: ಉದಯನಿಧಿ.ವಿರೋಧ ಪಕ್ಷದ ನಾಯಕನ ಸ್ಥಾನ: ಉದಯನಿಧಿ ಸ್ಟಾಲಿನ್ ಹೇಳಿದ್ದೇನು? .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.