ಉಡುಪಿ: ಎಸ್ಐಆರ್, ತೈಲ ಬೆಲೆ ಏರಿಕೆ ವಿರೋಧಿಸಿ ಹಾಗೂ ನೀಟ್ ಹಗರಣವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಜೋಡುಕಟ್ಟೆಯವರೆಗೆ ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ಜೋಡುಕಟ್ಟೆಯ ಬಳಿ ರಸ್ತೆ ತಡೆ ನಡೆಸಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ‘ಇಂದು ರಷ್ಯಾದಿಂದ ಕಚ್ಚಾ ತೈಲ ಖರೀದಿಸಬೇಕಾದರೆ ಅಮೆರಿಕದಿಂದ ಅನುಮತಿ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಆರೋಪಿಸಿದರು.

‘ಕೇಂದ್ರದ ಬಿಜೆಪಿ ಸರ್ಕಾರದ ವಿದೇಶಾಂಗ ನೀತಿಯ ವೈಫಲ್ಯದಿಂದಾಗಿ ಇಂದು ಜನರ ಮೇಲೆ ಹೊರೆ ಬೀಳುತ್ತಿದೆ’ ಎಂದೂ ಹೇಳಿದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಮಂಜುನಾಥ ಪೂಜಾರಿ, ಸತೀಶ್ ಕೊಡವೂರು, ಹರಿಪ್ರಸಾದ್ ರೈ, ಪ್ರಸಾದ್ ಕಾಂಚನ್, ಕಿಶನ್ ಹೆಗ್ಡೆ, ನಾಗೇಶ್ ಉದ್ಯಾವರ, ಜ್ಯೋತಿ ಹೆಬ್ಬಾರ್, ಹರೀಶ್ ಕಿಣಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-28-1463166159

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.