ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಲಿಸ್ತಾನ ಪರ ತೀವ್ರಗಾಮಿಗಳ ಮಟ್ಟ ಹಾಕಲು ₹1 ಕೋಟಿ ಮೀಸಲು: ಬ್ರಿಟನ್‌ ಸಚಿವ

Published 11 ಆಗಸ್ಟ್ 2023, 10:55 IST
Last Updated 11 ಆಗಸ್ಟ್ 2023, 10:55 IST
ಅಕ್ಷರ ಗಾತ್ರ

ನವದೆಹಲಿ: ಖಾಲಿಸ್ತಾನ ಪರ ತೀವ್ರಗಾಮಿಗಳನ್ನು ಮಟ್ಟ ಹಾಕಲು 95,000 ಪೌಂಡ್‌ (ಸುಮಾರು ₹1 ಕೋಟಿ) ಮೀಸಲಿಡಲಾಗಿದೆ ಎಂದು ಬ್ರಿಟನ್‌ ಭದ್ರತಾ ಸಚಿವ ಟಾಮ್‌ ಟುಗೆಂಧಟ್‌ ಘೋಷಿಸಿದ್ದಾರೆ.

ಅವರು ಮೂರು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಿದ್ದು, ಗುರುವಾರ ಭಾರತ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಈ ಕುರಿತು ತಿಳಿಸಿದರು ಎಂದು ಭಾರತ ಹೈಕಮಿಷನ್‌ ಕಚೇರಿ ತಿಳಿಸಿದೆ.

ಬ್ರಿಟನ್‌ನಲ್ಲಿ ಖಾಲಿಸ್ತಾನ ಪರ ಹೋರಾಟಗಾರರ ಚಟುವಟಿಕೆಗಳು ಹೆಚ್ಚಾಗಿರುವ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ.

ಭದ್ರತಾ ವಿಚಾರದಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಹಕಾರ ವೃದ್ಧಿ  ಮತ್ತು ಜಿ–20 ಭ್ರಷ್ಟಾಚಾರ ವಿರೋಧಿ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಟಾಮ್‌ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT