ಲಂಡನ್: ವಾಯವ್ಯ ಇಂಗ್ಲೆಂಡ್ನ ಎಸ್ಸೆಕ್ಸ್ನಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತೆಲಂಗಾಣದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 5 ಮಂದಿಗೆ ಗಂಭೀರ ಗಾಯಗಳಾಗಿವೆ.

23 ವರ್ಷದ ಚೈತನ್ಯ ತಾರೆ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ 21 ವರ್ಷದ ರಿಷಿ ತೇಜ ರಪೊಲು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ವೇಗವಾಗಿ ಕಾರು ಚಲಾಯಿಸುತ್ತಿದ್ದ ಎರಡೂ ಕಾರುಗಳ ಇಬ್ಬರೂ ಚಾಲಕರನ್ನು ಲಂಡನ್ ಪೊಲೀಸರು ಬಂಧಿಸಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

‘ದುರಾದೃಷ್ಟವಶಾತ್ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಇತರೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ಎಂದು ಎಸ್ಸೆಕ್ಸ್ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಪಘಾತ ಸಂಬಂಧಿತ ಸಿಸಿಸಿಟಿ ವಿಡಿಯೊ, ಇನ್ನಿತರ ಯಾವುದೇ ಮಾಹಿತಿ ಇದ್ದರೂ ಸಲ್ಲಿಸುವಂತೆ ಸಾರ್ವಜನಿಕ ಹೇಳಿಕೆ ಬಿಡುಗಡೆ ಮಾಡಲಾಗಿದೆ.

ಬ್ರಿಟನ್ನ ಭಾರತೀಯ ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳ ಒಕ್ಕೂಟ (ಎನ್ಐಎಎಸ್ಯು) ಸಂತಾಪ ಸೂಚಿಸಿ ಹೇಳಿಕೆ ಬಿಡುಗಡೆ ಮಾಡಿದೆ.

‘ಎಸ್ಸೆಕ್ಸ್ನಲ್ಲಿ ತೆಲುಗು ಸಮುದಾಯದ ಒಂಬತ್ತು ವಿದ್ಯಾರ್ಥಿಗಳನ್ನೊಳಗೊಂಡ ರಸ್ತೆ ಅಪಘಾತದ ಸುದ್ದಿ ಕೇಳಿ ನಾವು ತುಂಬಾ ದುಃಖಿತರಾಗಿದ್ದೇವೆ’ ಎಂದು ಅದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.