ನವದೆಹಲಿ: ದೆಹಲಿಯ ಈಶಾನ್ಯ ಭಾಗದಲ್ಲಿ 2020ರಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದ ಪ್ರಕರಣದ ಆರೋಪಿ ಉಮರ್ ಖಾಲಿದ್ ಅವರು ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್ನ ಆದೇಶ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಗುರುವಾರ ಅರ್ಜಿ ಸಲ್ಲಿಸಿದ್ದಾರೆ. ಖಾಲಿದ್ ಅವರ ಜಾಮೀನು ಅರ್ಜಿಯನ್ನು ದೆಹಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿತ್ತು.

‘ಸೋದರ ಸಂಬಂಧಿ ಮೃತಪಟ್ಟಿದ್ದು, 40 ದಿನ ನಡೆಸುವ ಧಾರ್ಮಿಕ ವಿಧಿಗಳಲ್ಲಿ ಪಾಲ್ಗೊಳ್ಳಬೇಕು. ತಾಯಿ ಕೂಡ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು, ಆರೈಕೆ ಮಾಡಬೇಕಾಗಿರುವ ಕಾರಣ 15 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಬೇಕು’ ಎಂದು ಖಾಲಿದ್ ಸೆಷನ್ಸ್ ಕೋರ್ಟ್ನಲ್ಲಿ ಮನವಿ ಮಾಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-51-1163613793

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.