ಕೋಲ್ಕತ್ತ: ಇಲ್ಲಿನ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗುರುವಾರ ವಾರಸುದಾರರಿಲ್ಲದ ಬ್ಯಾಗ್‌ವೊಂದು ಪತ್ತೆಯಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ಬ್ಯಾಗ್‌ನಲ್ಲಿ ಬಾಂಬ್ ಇರಬಹುದು ಎಂಬ ಶಂಕೆ ಹಿನ್ನೆಲೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಸ್ಥಳ ಪರಿಶೀಲನೆ ನಡೆಸುತ್ತಿವೆ.
ಆಸ್ಪತ್ರೆಯಲ್ಲಿ ಬ್ಯಾಗ್ ಒಂದು ಪತ್ತೆಯಾಗಿದೆ. ಬಾಂಬ್ ನಿಷ್ಕ್ರಿಯ ದಳ ಪರಿಶೀಲಿಸುತ್ತಿದೆ. ಶಂಕಿತ ವಸ್ತುಗಳು ಇರುವ ಕುರಿತು ಯಾವುದೇ ಮಾಹಿತಿ ಈವರೆಗೂ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.