ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 11 ವರ್ಷ ಪೂರೈಸಿದ್ದು, ಈ ಹಿನ್ನೆಲೆ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ. ಅಘೋಷಿತ ತುರ್ತು ಪರಿಸ್ಥಿತಿಗೆ 11 ವರ್ಷವಾಗಿದೆ ಎಂದು ವ್ಯಂಗ್ಯವಾಡಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದ್ದು, ಮೋದಿ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಅಚ್ಛೇ ದಿನ್ ಭರವಸೆಗಳು ವಾಸ್ತವದಲ್ಲಿ ದುಃಸ್ವಪ್ನವಾಗಿದೆ ಎಂದು ಆರೋಪಿಸಿದ್ದಾರೆ.
.Covid: ದೆಹಲಿಯಲ್ಲಿ 104 ಸಕ್ರಿಯ ಪ್ರಕರಣಗಳು.ಪ್ರಧಾನಿ ಮೋದಿ ನಾಯಕತ್ವದಲ್ಲಿ ಆರೋಗ್ಯ ಮೂಲಸೌಕರ್ಯಕ್ಕೆ ಭಾರಿ ಉತ್ತೇಜನ: ಅಮಿತ್ ಶಾ.
ವಾರ್ಷಿಕ ಎರಡು ಕೋಟಿಗೂ ಅಧಿಕ ಉದ್ಯೋಗ ಸೃಷ್ಟಿ ನೀಡಿದ್ದ ಭರವಸೆಗಳು, ಭರವಸೆಗಳಾಗಿಯೇ ಕಣ್ಮರೆಯಾಗುತ್ತಿವೆ. ರೈತರು ಆದಾಯ ದ್ವಿಗುಣವಾಗಲಿಲ್ಲ, ಭದ್ರತಾ ವೈಫಲ್ಯ, ಮಹಿಳೆಯರು, ಎಸ್ಸಿ,ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳಿಗೆ ಕೊನೆಯೇ ಇಲ್ಲ. ಎಂದು ಖರ್ಗೆ ಕಿಡಿಕಾರಿದ್ದಾರೆ.

ದೇಶದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗ ಉತ್ತುಂಗದಲ್ಲಿದೆ ಎಂದು ಖರ್ಗೆ ಹೇಳಿದ್ದಾರೆ. 'ಮೇಕ್ ಇನ್ ಇಂಡಿಯಾ' ವಿಫಲವಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ದೇಶದಲ್ಲಿ ಕಳೆದ 11 ವರ್ಷಗಳಲ್ಲಿ 140 ಕೋಟಿಗೂ ಅಧಿಕ ಜನರು ತೊಂದರೆಗೀಡಾಗಿದ್ದಾರೆ. ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದ್ದೂ, ಇದು ಕಮಲದ ಸಂಕೇತವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

2014ರ ಮೇ 26ರಂದು ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
.ವಂಚನೆ ಪ್ರಕರಣ: ಜೆಪಿ ಇನ್ಫ್ರಾಟೆಕ್ ಕಂಪನಿ ಮೇಲೆ ED ದಾಳಿ; ₹1.70 ಕೋಟಿ ನಗದು ವಶ.ಪಾಕ್ಗೆ ಭದ್ರತಾ ಮಾಹಿತಿ ಸೋರಿಕೆ: ಸಿಆರ್ಪಿಎಫ್ ಸಿಬ್ಬಂದಿ ಬಂಧಿಸಿದ ಎನ್ಐಎ.ಅಣ್ವಸ್ತ್ರದ ಆಧುನೀಕರಣಕ್ಕೆ ಚೀನಾ ನೆರವನ್ನು ಅವಲಂಬಿಸಿದ ಪಾಕ್: ಅಮೆರಿಕದ ವರದಿ.ಸಂಡೂರು | ಕಾರು, ಲಾರಿ ಮುಖಾಮುಖಿ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.