ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೊಯಿಡಾದಲ್ಲಿ ಎರಡು ಕಟ್ಟಡಗಳು ಕುಸಿದು ಬಿದ್ದು ಕನಿಷ್ಠ ಮೂವರು ಬಲಿ

ಹಲವರು ಅವಶೇಷದಡಿ ಸಿಲುಕಿರುವ ಶಂಕೆ
Last Updated 18 ಜುಲೈ 2018, 4:57 IST
ಅಕ್ಷರ ಗಾತ್ರ

ನವದೆಹಲಿ: ಗ್ರೇಟರ್ ನೊಯಿಡಾದ ಶಾಹ್‌ಬೆರಿ ಗ್ರಾಮದಲ್ಲಿ ಎರಡುಕಟ್ಟಡಗಳು ಕುಸಿದು ಬಿದ್ದ ಪರಿಣಾಮ ಕನಿಷ್ಠ ಮೂವರು ಮೃತಪಟ್ಟಿದ್ದಾರೆ.

ಮೊದಲಿಗೆ ಆರು ಮಹಡಿಯ ನಿರ್ಮಾಣ ಹಂತದ ಕಟ್ಟಡಕುಸಿದು ಬಿದ್ದಿದೆ. ಇದರಿಂದಾಗಿ ಸನಿಹದಲ್ಲೇ ಇದ್ದ ಮತ್ತೊಂದು ಕಟ್ಟಡಕ್ಕೆ ಹಾನಿಯಾಗಿ ಅದೂ ಸಹ ಕುಸಿದು ಬಿದ್ದಿದೆ.ಮಂಗಳವಾರ ತಡರಾತ್ರಿ ಘಟನೆ ಸಂಭವಿಸಿದೆ.

ಕಟ್ಟಡ ಕುಸಿದು ಬೀಳುವ ವೇಳೆ ಕನಿಷ್ಠ 12 ಕಾರ್ಮಿಕರು ಅದರೊಳಗೆ ಇದ್ದ ಅನುಮಾನ ಇದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ತಂಡವನ್ನೂ ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ಅರುಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

20ರಿಂದ 25 ಜನ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಎನ್‌ಡಿಆರ್‌ಎಫ್‌ ತಂಡದ ಜತೆ ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾಗುವಂತೆ ಜಿಲ್ಲಾ ಪೊಲೀಸರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. ಕಾರ್ಯಾಚರಣೆಯನ್ನು ನಿರ್ವಹಿಸುವಂತೆ ಗೌತಮ್ ಬುದ್ಧ ನಗರ ಜಿಲ್ಲಾ ಮ್ಯಾಜಿಸ್ಟ್ರೇಟರಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT