ನಾಗಪುರ: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದ ಆರೋಗ್ಯ ಕ್ಷೇತ್ರದ ಮೂಲಸೌಕರ್ಯಕ್ಕೆ ದೊಡ್ಡ ಮಟ್ಟದ ಉತ್ತೇಜನ ಸಿಕ್ಕಿದೆ. ಈ ಹಿಂದಿನ ಕಾಂಗ್ರೆಸ್ ಸರ್ಕಾರ ಈ ಕ್ಷೇತ್ರವನ್ನು ಕಡೆಗಣಿಸಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆ (ಎನ್ಸಿಐ) ಆವರಣದಲ್ಲಿ ರೋಗಿಗಳು ಮತ್ತು ಅವರ ಆರೈಕೆದಾರರಿಗೆ ವಸತಿ ಸೌಲಭ್ಯ ಕಲ್ಪಿಸುವ ‘ಸ್ವಸ್ಥಿ ನಿವಾಸ’ ಸಂಕೀರ್ಣದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ಅವರು ಮಾತನಾಡಿದರು. ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆ(ಎನ್ಸಿಐ) ಮಹಾರಾಷ್ಟ್ರದ ಬಡವರಷ್ಟೇ ಅಲ್ಲದೇ ಮಧ್ಯಪ್ರದೇಶ, ತೆಲಂಗಾಣ, ಛತ್ತೀಸಗಢ ಸೇರಿ ಹಲವು ರಾಜ್ಯಗಳ ಜನರಿಗೆ ಸೇವೆ ನೀಡುತ್ತಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಭಾರತದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಬಾಯಿ ಕ್ಯಾನ್ಸರ್ ರೋಗಿಗಳಿದ್ದಾರೆ. ದೇಶದಲ್ಲಿ ಪ್ರತಿ 8 ನಿಮಿಷಕ್ಕೆ ಒಬ್ಬರು ಗರ್ಭಕಂಠ ಕ್ಯಾನ್ಸರ್ನಿಂದ ಸಾವಿಗೀಡಾಗುತ್ತಿದ್ದಾರೆ. ಇತ್ತೀಚಿನ ವರ್ಷಗಳವರೆಗೂ ಕ್ಯಾನ್ಸರ್ ಚಿಕಿತ್ಸೆ ದುರ್ಲಭವಾಗಿತ್ತು. ಕಳೆದ 15 ವರ್ಷಗಳಲ್ಲಿ ರೋಗಕ್ಕೆ ಚಿಕಿತ್ಸೆ ನೀಡಲು ಹಲವು ಉತ್ತಮ ಸಂಸ್ಥೆಗಳು ಬಂದಿವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.