ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಟು ಅಮಾನ್ಯೀಕರಣದಿಂದ ಅನೌಪಚಾರಿಕ ವಲಯಕ್ಕೆ ಸಂಕಷ್ಟ: ಮನಮೋಹನ್‌ ಸಿಂಗ್‌

Last Updated 2 ಮಾರ್ಚ್ 2021, 9:35 IST
ಅಕ್ಷರ ಗಾತ್ರ

ತಿರುವನಂತಪುರ: ದೇಶದಲ್ಲಿ ನಿರುದ್ಯೋಗ ಹೆಚ್ಚಿದೆ. 2016ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ತೆಗೆದುಕೊಂಡ ನೋಟು ಅಮಾನ್ಯೀಕರಣ ನಿರ್ಧಾರದಿಂದಾಗಿ ಅನೌಪಚಾರಿಕ ವಲಯಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೇರಳದ ರಾಜೀವ್‌ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಡೆವೆಲಂಪ್‌ಮೆಂಟ್‌ ಸ್ಟಡೀಸ್‌ ‘ಪ್ರತೀಕ್ಷಾ 2030’ ಶೀರ್ಷಿಕೆಯಡಿ ಮಂಗಳವಾರ ಆಯೋಜಿಸಿದ್ದ ವರ್ಚುವಲ್‌ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,‘ಕೇಂದ್ರ ಸರ್ಕಾರವು ಯೋಜನೆ ಮತ್ತು ಇತರೆ ವಿಷಯಗಳ ಬಗ್ಗೆ ರಾಜ್ಯಗಳೊಂದಿಗೆ ನಿಯಮಿತವಾಗಿ ಸಮಾಲೋಚನೆಯನ್ನು ಕೂಡ ನಡೆಸುವುದಿಲ್ಲ’ ಎಂದು ಟೀಕಿಸಿದರು.

‘ಭಾರತ ಸರ್ಕಾರ ಮತ್ತು ರಿಸರ್ವ್‌ ಬ್ಯಾಂಕ್‌, ತಾತ್ಕಾಲಿಕ ಪರಿಹಾರ ಕ್ರಮಗಳ ಮೂಲಕ ಸಣ್ಣ ಮತ್ತು ಮಧ್ಯಮ ವಲಯಗಳಲ್ಲಿ ಎದುರಾಗಿರುವ ಸಾಲದ ಬಿಕ್ಕಟ್ಟನ್ನು ಮರೆಮಾಚಲು ಸಾಧ್ಯವಿಲ್ಲ. ಕೇರಳ ಮತ್ತು ಇತರೆ ರಾಜ್ಯಗಳು ಅತಿಯಾದ ಸಾಲದ ಹೊರೆಗೆ ಸಿಲುಕಿವೆ. ಇದರಿಂದಾಗಿ ಸಾರ್ವಜನಿಕ ಹಣಕಾಸು ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಅಲ್ಲದೆ ಇದು ಮುಂದಿನ ಬಜೆಟ್‌ನಲ್ಲಿ ದೊಡ್ಡ ಹೊರೆಯನ್ನು ಸೃಷ್ಟಿಸುತ್ತದೆ’ ಎಂದು ಅವರು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT