ನವದೆಹಲಿ: ಉತ್ತರ ಪ್ರದೇಶದ ಪ್ರಭಾವಿ ಕಾಂಗ್ರೆಸ್‌ಜಿತಿನ್ ಪ್ರಸಾದ್ ಅವರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಹೋರಾಟಕ್ಕೆ ಇಳಿದಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಪಿಲ್ ಸಿಬಲ್ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಸರ್ಜಿಕಲ್ ದಾಳಿ ನಡೆಸುವ ಬದಲು ಕಾಂಗ್ರೆಸ್ ಅನ್ನುಗುರಿಯಾಗಿಸಿಕೊಂಡಿರುವುದು ದುರದುಷ್ಟಕರ. ಆ ಮೂಲಕ ತನ್ನ ಶಕ್ತಿಯನ್ನು ವ್ಯಯಮಾಡಿಕೊಳ್ಳುತ್ತಿದೆಎಂದು ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಜಿತಿನ್ ಪ್ರಸಾದ್ ಅವರನ್ನುಗುರಿಯಾಗಿಸಿಕೊಂಡು ಹೋರಾಟಕ್ಕೆ ಇಳಿದಿರುವುದು ಹಾಗೂ ಶಿಸ್ತು ಕ್ರಮಕ್ಕೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಲ್ಲ,ಅಧ್ಯಕ್ಷರ ಬದಲಾವಣೆಗಾಗಿ ಪತ್ರ ಬರೆದಿರುವುದಕ್ಕೆ ಈ ಶಿಕ್ಷೆಯೇ ಎಂದು ಕಪಿಲ್ ಸಿಬಲ್ ಸೇರಿದಂತೆ ಕೆಲ ಕಾಂಗ್ರೆಸ್ ಮುಖಂಡರು ಪ್ರಶ್ನೆ ಮಾಡಿದ್ದಾರೆ.

ಸಕ್ರಿಯ ಅಧ್ಯಕ್ಷರು ಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ 23 ಜನ ಪತ್ರ ಬರೆದವರಲ್ಲಿ ಜಿತಿನ್ ಪ್ರಸಾದ್ ಕೂಡ ಒಬ್ಬರಾಗಿದ್ದಾರೆ.

ಉತ್ತರ ಪ್ರದೇಶ ಕಾಂಗ್ರೆಸ್‌ನಲ್ಲಿ ಜಿತಿನ್ ಹಿಡಿತ ಹೊಂದಿದ್ದು, ಬ್ರಾಹ್ಮಣ ಸಮುದಾಯದ ವೋಟ್ ಬ್ಯಾಂಕ್ ಇವರಬೆನ್ನಿಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.