ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯು ‘ಮಾದರಿ ಬಾಡಿಗೆ ಕಾಯ್ದೆ’ಗೆ ಅನುಮೋದನೆ ನೀಡಿದೆ.

ಮನೆಗಳನ್ನು ಬಾಡಿಗೆ ಆಧಾರದಲ್ಲಿ ನೀಡುವುದಕ್ಕೆ ಸಂಬಂಧಿಸಿದ ಕಾನೂನಿನಲ್ಲಿ ಸಮಗ್ರ ಬದಲಾವಣೆ ತರುವುದು ‘ಮಾದರಿ ಬಾಡಿಗೆ ಕಾಯ್ದೆ’ಯಿಂದ ಸಾಧ್ಯವಾಗಲಿದೆ ಎಂದು ಕೇಂದ್ರ ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.

‘ಸದ್ಯ ಚಾಲ್ತಿಯಲ್ಲಿರುವ ಬಾಡಿಗೆ ಕಾಯ್ದೆಗೆ ಹೊಸದಾಗಿ ನಿಯಮಗಳನ್ನು ರಚಿಸಲು ಅಥವಾ ಈಗಿರುವ ನಿಯಮಗಳಿಗೆ ತಿದ್ದುಪಡಿ ತರಲು ಅನುವು ಮಾಡಿ ಕೊಡುವ ಈ ಮಾದರಿ ಬಾಡಿಗೆ ಕಾಯ್ದೆಯನ್ನು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಲು ಸಹ ಸಂಪುಟ ಒಪ್ಪಿಗೆ ನೀಡಿತು’ ಎಂದು ಪ್ರಕಟಣೆ ತಿಳಿಸಿದೆ.

ಮನೆಗಳನ್ನು ಬಾಡಿಗೆ ನೀಡುವ ವ್ಯವಸ್ಥೆಗೆ ಉದ್ಯಮ ಸ್ವರೂಪ ನೀಡುವುದು. ಈ ಉದ್ಯಮದಲ್ಲಿ ಪಾಲ್ಗೊಳ್ಳುವಂತೆಖಾಸಗಿ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶ ಇದೆ. ಇದರಿಂದ ವಸತಿ ಕ್ಷೇತ್ರ ಎದುರಿಸುತ್ತಿರುವ ಕೊರತೆಯನ್ನು ನೀಗಿಸಲು ಸಾಧ್ಯವಾಗಲಿದೆ ಎಂಬ ನಿರೀಕ್ಷೆ ಇದೆ ಎಂದೂ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.