ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರ ಮಹಿಳೆಯರನ್ನು ತಮಾಷೆಯಾಗಿ ಪರಿಗಣಿಸುತ್ತಿದೆ: ಪ್ರಿಯಾಂಕಾ ಗಾಂಧಿ

ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣ ಜಾರಿಗೆ ತರಲಾಗದಿದ್ದರೆ ಏನು ಪ್ರಯೋಜನ?–ಪ್ರಿಯಾಂಕಾ ಗಾಂಧಿ
Published 5 ಅಕ್ಟೋಬರ್ 2023, 10:48 IST
Last Updated 5 ಅಕ್ಟೋಬರ್ 2023, 10:48 IST
ಅಕ್ಷರ ಗಾತ್ರ

ಧಾರ್ (ಮಧ್ಯಪ್ರದೇಶ): ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳೆಯರನ್ನು ತಮಾಷೆಯಾಗಿ ಪರಿಗಣಿಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದರು.

ಇಂದು(ಗುರುವಾರ) ಮಧ್ಯಪ್ರದೇಶದ ಧಾರ್ ಜಿಲ್ಲೆಯ ಮೋಹನ್‌ಖೇಡಾದಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರಲು ಸಾಧ್ಯವಾಗದಿದ್ದರೆ, ಈ ಹಂತದಲ್ಲಿ ಏಕೆ ಮಂಡಿಸಲಾಗಿದೆ? ಎಂದು ಪ್ರಶ್ನಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ತಂದಿದೆ. ನಾವೆಲ್ಲರೂ (ವಿರೋಧ ಪಕ್ಷಗಳು) ಸಹ ಅದನ್ನು ಬೆಂಬಲಿಸಿದ್ದೇವೆ. ಆದರೆ ಅದಕ್ಕೂ ಮೊದಲು ಜನಗಣತಿ ನಡೆಸಲಾಗುವುದು, ಕಾಯ್ದೆಯನ್ನು 10 ವರ್ಷಗಳವರೆಗೆ ಜಾರಿಗೆ ತರುವುದಿಲ್ಲ ಎಂದು ಸರ್ಕಾರ ಹೇಳಿದೆ. ಹಾಗಾದರೆ ಈ ಘೋಷಣೆಯ ಅರ್ಥವೇನು? ಎಂದು ಅವರು ಪ್ರಶ್ನಿಸಿದರು.

ಮಹಿಳಾ ಮೀಸಲಾತಿ ಮಸೂದೆ: ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಇತ್ತೀಚೆಗೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ. ಆದರೆ, ಈ ಪ್ರಸ್ತಾಪಿತ ಕಾಯ್ದೆ ಅಂಗೀಕಾರವಾದರೂ, 2024ರ ಲೋಕಸಭೆ ಚುನಾವಣೆಯಿಂದ ಅಸ್ತಿತ್ವಕ್ಕೆ ಬರುವುದು ಸಾಧ್ಯವಿಲ್ಲ. 2029ರ ಬಳಿಕ ಇದು ಅನುಷ್ಠಾನಗೊಳ್ಳಲಿದೆ ಎಂಬುವುದು ಕಾಂಗ್ರೆಸ್ ಆರೋಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT