ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಐಎಸ್‌ಎಫ್‌ ಪರೇಡ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ

Last Updated 12 ಮಾರ್ಚ್ 2023, 2:45 IST
ಅಕ್ಷರ ಗಾತ್ರ

ಹೈದರಾಬಾದ್‌: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್‌)ಯ 54ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತಾ ಶಾ ಭಾಗವಹಿಸಿ ಯೋಧರಿಂದ ಗೌರವ ವಂದನೆ ಸ್ವೀಕರಿಸಿದರು.

ಭಾನುವಾರ ಬೆಳಗ್ಗೆ ನಡೆದ ಪರೇಡ್‌ನಲ್ಲಿ ಅವರು ಭಾಗವಹಿಸಿದ್ದರು. ಸಿಐಎಸ್‌ಎಫ್‌ನ ಹಿರಿಯ ಅಧಿಕಾರಿಗಳು ಕೂಡ ಅವರ ಜೊತೆ ಇದ್ದರು.

ನಮ್ಮ ಭದ್ರತಾ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವನ್ನು ಹೊಂದಿದ್ದು, ಅದರ ಎಲ್ಲ ಯೋಧರಿಗೆ ಸಂಸ್ಥಾಪನಾ ದಿನದ ಶುಭಾಶಯಗಳು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ಮಾ.10) ಟ್ವೀಟ್ ಮಾಡಿದ್ದರು.

1969ರ ಮಾ.10ರಂದು ಸಿಐಎಸ್‌ಎಫ್‌ ಸ್ಥಾಪನೆಗೊಂಡಿತ್ತು. ಹೀಗಾಗಿ ಪ್ರತಿ ವರ್ಷ ಮಾ.10ರಂದು ಸಿಐಎಸ್‌ಫ್‌ ಸಂಸ್ಥಾಪನಾ ದಿನವನ್ನು ಆಚರಿಸಲಾಗುತ್ತದೆ. ಕೇಂದ್ರದ ಪ್ರಮುಖ 5 ಭದ್ರತಾ ಪಡೆಗಳಲ್ಲಿ ಸಿಐಎಸ್‌ಎಫ್‌ ಒಂದಾಗಿದೆ. ವಿಮಾನ ನಿಲ್ದಾಣ ಸೇರಿದಂತೆ ದೇಶದ ಪ್ರಮುಖ ಸ್ಥಳಗಳ ಭದ್ರತೆ ಹೊಣೆ ಈ ಪಡೆಯ ಮೇಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT