ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿ ಮಾತನಾಡಲಿರುವ ಅಮಿತ್ ಶಾ

Published 9 ಆಗಸ್ಟ್ 2023, 9:40 IST
Last Updated 9 ಆಗಸ್ಟ್ 2023, 9:40 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಜೆ 5 ಗಂಟೆಗೆ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಸತ್ತಿನ ಉಭಯ ಸದನಗಳಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಭಾರಿ ಜಟಾಪಟಿ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಬಿಗಿಪಟ್ಟು ಹಿಡಿದಿರುವ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ.

ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿ ಮಂಗಳವಾರದಿಂದ ಚರ್ಚೆ ಆರಂಭವಾಗಿದ್ದು, ಮಣಿಪುರ ಹಿಂಸಾಚಾರ ವಿಷಯಕ್ಕೆ ಸಂಬಂಧಿಸಿ ಕಾವೇರಿತು.

ಮಣಿಪುರದಲ್ಲಿ ಮಹಿಳೆಯರ ಸುರಕ್ಷತೆ ಹಾಗೂ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರವು ಸಂವೇದನಾ ರಹಿತವಾಗಿ ವರ್ತಿಸುತ್ತಿದೆ ಎಂದು ಪ್ರತಿಪಕ್ಷಗಳ ಸದಸ್ಯರು ಚಾಟಿ ಬೀಸಿದ್ದಾರೆ. ಅದರಲ್ಲೂ ವಿವಿಧ ಪಕ್ಷಗಳ ಸಂಸದೆಯರು ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಸತ್‌ನ ಮುಂಗಾರು ಅಧಿವೇಶನ ಶುರುವಾದ ದಿನದಿಂದಲೂ ಮಣಿಪುರ ವಿಷಯವು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು. ಸದನದಲ್ಲಿಯೇ ಮೋದಿ ಅವರಿಂದ ಹೇಳಿಕೆ ಪಡೆಯಬೇಕೆಂದು ಬಿಗಿ ನಿಲುವು ತಳೆದಿರುವ ‘ಇಂಡಿಯಾ’ ಹೆಣೆದಿರುವ ತಂತ್ರಗಾರಿಕೆಯ ಭಾಗವಾಗಿ ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ, ಕೇಂದ್ರ ಹಾಗೂ ಮಣಿಪುರ ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ನೇತೃತ್ವದ ಸರ್ಕಾರದ ವಿರುದ್ಧ ಸಂಸದರು ಮುಗಿಬಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT