ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖುಂತಿ ಲೋಕಸಭಾ ಕ್ಷೇತ್ರ: ಕೇಂದ್ರ ಸಚಿವ ಅರ್ಜುನ್ ಮುಂಡಾ ನಾಮಪತ್ರ ಸಲ್ಲಿಕೆ

Published 23 ಏಪ್ರಿಲ್ 2024, 10:31 IST
Last Updated 23 ಏಪ್ರಿಲ್ 2024, 10:31 IST
ಅಕ್ಷರ ಗಾತ್ರ

ಖುಂತಿ (ಜಾರ್ಖಂಡ್): ಖುಂತಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಅರ್ಜುನ್ ಮುಂಡಾ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸುವ ವೇಳೆ ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ, ಎಜೆಎಸ್‌ಯು ಪಕ್ಷದ ಮುಖ್ಯಸ್ಥ ಸುದೇಶ್ ಮಹ್ತೋ ಮತ್ತು ಇತರ ಹಿರಿಯ ನಾಯಕರು ಜತೆಗಿದ್ದರು.

ನಾಮಮತ್ರ ಸಲ್ಲಿಸುವ ಮೊದಲು ಮುಂಡಾ ಖುಂತಿಯ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಿರಂತರವಾಗಿ ದೇಶದ ಜನರ ಸೇವೆ ಸಲ್ಲಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT