ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ನಿತಿನ್‌ ಗಡ್ಕರಿ ನಾಮಪತ್ರ ಸಲ್ಲಿಕೆ

Published 27 ಮಾರ್ಚ್ 2024, 14:18 IST
Last Updated 27 ಮಾರ್ಚ್ 2024, 14:18 IST
ಅಕ್ಷರ ಗಾತ್ರ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಲೋಕಸಭಾ ಕೇತ್ರದ ಅಭ್ಯರ್ಥಿಯಾಗಿ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಎನ್‌ಡಿಎ ಸರ್ಕಾರವು ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಗಡ್ಕರಿ ಅವರು ನಾಗ್ಪುರದಲ್ಲಿ ರೋಡ್‌ ಶೋ ನಡೆಸಿದರು. ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌, ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಚಂದ್ರಶೇಖರ ಬಾವನಕುಳೆ, ಎನ್‌ಸಿಪಿಯ ಪ್ರಫುಲ್ ಪಟೇಲ್ ಜತೆಗಿದ್ದರು.

ಅಣ್ಣಾಮಲೈ, ದಯಾನಿಧಿ ನಾಮಪತ್ರ ಸಲ್ಲಿಕೆ:

ಚೆನ್ನೈ: ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಹಾಗೂ ಕೊಯಮತ್ತೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಅಣ್ಣಾಮಲೈ, ಡಿಎಂಕೆ ಸಂಸದ ಹಾಗೂ ಚೆನ್ನೈ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ದಯಾನಿಧಿ ಮಾರನ್‌ ಬುಧವಾರ ನಾಮಪತ್ರ ಸಲ್ಲಿಸಿದರು.

ಅಣ್ಣಾಮಲೈ ಅವರು ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ ಮಹಿಳಾ ಮೋರ್ಚಾ ಮುಖ್ಯಸ್ಥೆ ವಾನತಿ ಶ್ರೀನಿವಾಸನ್‌ ಮತ್ತಿತರರು ಜೊತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT