ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಪ್ರಚಾರದ ವೇಳೆ ಮೂರ್ಛೆ ಹೋದ ಗಡ್ಕರಿ

Published 24 ಏಪ್ರಿಲ್ 2024, 14:19 IST
Last Updated 24 ಏಪ್ರಿಲ್ 2024, 14:19 IST
ಅಕ್ಷರ ಗಾತ್ರ

ಯವತ್ಮಾಲ್‌ (ಮಹಾರಾಷ್ಟ್ರ): ಮಹಾರಾಷ್ಟ್ರದ ಯವತ್ಮಾಲ್‌ ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಿದ್ದಾಗ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಮೂರ್ಛೆ ಹೋದರು.

ಯವತ್ಮಾಲ್‌ –ವಾಶಿಂ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪುಸಾದ್‌ನಲ್ಲಿ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಾಗ ಸಚಿವರು ಮೂರ್ಛೆ ಹೋಗಿದ್ದು, ಕೂಡಲೇ ಭದ್ರತಾ ಸಿಬ್ಬಂದಿ ಅವರನ್ನು ಹಿಡಿದುಕೊಂಡಿದ್ದಾರೆ. ಕೆಲ ನಿಮಿಷಗಳ ನಂತರ ಚೇತರಿಸಿಕೊಂಡ ಅವರು ಭಾಷಣ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಬಿಸಿಲ ಧಗೆಗೆ ಅಸ್ವಸ್ಥಗೊಂಡಿದ್ದೆ. ಈಗ ನಾನು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ. ಚುನಾವಣಾ ರ್‍ಯಾಲಿಗಳಲ್ಲಿ ಪಾಲ್ಗೊಳ್ಳುತ್ತೇನೆ’ ಎಂದು ಗಡ್ಕರಿ ಅವರು ‘ಎಕ್ಸ್‌’ ಮಾಧ್ಯಮದಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT