ಮುಂಬೈ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಎರಡು ಸಲ ಜೀವ ಬೆದರಿಕೆ ಕರೆಗಳು ಬಂದಿವೆ.

ಮಹಾರಾಷ್ಟ್ರದ ನಾಗಪುರದಲ್ಲಿರುವ ಅವರ ಕಚೇರಿಗೆ ಬೆದರಿಕೆ ಕರೆಗಳು ಬಂದಿರುವುದಾಗಿ ಅವರ ಕಚೇರಿ ಸಿಬ್ಬಂದಿ ಹೇಳಿದ್ದಾರೆ. ಶನಿವಾರ ಬೆಳಗ್ಗೆ 11.30ಕ್ಕೆ ಹಾಗೂ 11.40ಕ್ಕೆ ಎರಡು ಬಾರಿ ಕರೆ ಮಾಡಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಚಿವರ ಕಚೇರಿಗೂ ಮತ್ತು ನಿವಾಸಕ್ಕೂ ಒಂದು ಕಿ.ಮೀಟರ್ ದೂರ ಇದೆ. ಕಚೇರಿಯ ಲ್ಯಾಂಡ್‌ಲೈನ್ ಸಂಖ್ಯೆಗೆ ಕರೆ ಮಾಡಲಾಗಿದೆ. ಕರೆ ಮಾಡಿದ ವ್ಯಕ್ತಿ ಹಲವು ಬೇಡಿಕೆಗಳನ್ನು ಇಟ್ಟಿದ್ದು ಈಡೇರಿಸದಿದ್ದರೆ ಹತ್ಯೆ ಮಾಡುವುದಾಗಿ ಹೇಳಿದ್ದಾರೆ ಎಂದು ಗಡ್ಕರಿ ಕಚೇರಿ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಕಚೇರಿಗೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ನಾಗಪುರದಿಂದಲೇ ಕರೆ ಮಾಡಲಾಗಿದ್ದು ಆ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.