ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಂದಿರ ದಿನದಂತೆಯೇ ಪತ್ನಿಯ ದಿನವನ್ನೂ ಆಚರಿಸಬೇಕು: ಕೇಂದ್ರ ಸಚಿವ ರಾಮದಾಸ ಆಠವಲೆ

Last Updated 15 ಮೇ 2022, 16:23 IST
ಅಕ್ಷರ ಗಾತ್ರ

ಮುಂಬೈ: ತಾಯಂದಿರ ದಿನದಂತೆಯೇ ಪತ್ನಿಯ ದಿನವನ್ನೂ ಆಚರಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಇಲಾಖೆಯ ರಾಜ್ಯ ಖಾತೆ ಸಚಿವ ರಾಮದಾಸ ಆಠವಲೆ ಅಭಿಪ್ರಾಯಪಟ್ಟಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಮಾತನಾಡಿದ ಅವರು, ‘ತಾಯಿ ಜನ್ಮ ನೀಡಿದರೆ ಪತ್ನಿಯು ಪತಿಯ ಕಷ್ಟ ಹಾಗೂ ಸುಖಗಳಲ್ಲಿ ಜತೆಗಿರುತ್ತಾಳೆ’ ಎಂದು ಅವರು ಹೇಳಿದ್ದಾರೆ.

‘ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ. ನಾವು ಪತ್ನಿಯ ದಿನ ಆಚರಿಸಬೇಕು’ ಎಂದು ಅವರು ಹೇಳಿದ್ದಾರೆ.

ಪ್ರತಿ ವರ್ಷ ಮೇ ತಿಂಗಳ ಎರಡನೇ ಭಾನುವಾರವನ್ನು ಅಂತರರಾಷ್ಟ್ರೀಯ ತಾಯಂದಿರ ದಿನವನ್ನಾಗಿ ಆಚರಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT