ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೇಟಿ ಬಚಾವೊ – ಬೇಟಿ ಪಡಾವೊ ಸಾಲನ್ನು ತಪ್ಪಾಗಿ ಬರೆದ ಕೇಂದ್ರ ಸಚಿವೆ ಸಾವಿತ್ರಿ!

Published 19 ಜೂನ್ 2024, 12:48 IST
Last Updated 19 ಜೂನ್ 2024, 12:48 IST
ಅಕ್ಷರ ಗಾತ್ರ

ಧಾರ್‌ (ಮಧ್ಯಪ್ರದೇಶ): ಕೇಂದ್ರ ಸಚಿವೆ ಸಾವಿತ್ರಿ ಠಾಕೂರ್‌ ಅವರು ಹಿಂದಿಯಲ್ಲಿ ‘ಬೇಟಿ ಬಚಾವೊ –ಬೇಟಿ ಪಡಾವೊ’ ಸಾಲನ್ನು ತಪ್ಪಾಗಿ ಬರೆದಿದ್ದಾರೆ ಎನ್ನುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 

ಧಾರ್‌ ನಗರದ ಸರ್ಕಾರಿ ಶಾಲೆಯೊಂದರಲ್ಲಿ ಜೂನ್‌ 18ರಂದು ‘ಸ್ಕೂಲ್‌ ಚಲೋ ಅಭಿಯಾನ’ವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಕೇಂದ್ರ ಮಹಿಳಾ ಮತ್ತು ಮಕ್ಕಳ ರಾಜ್ಯ ಖಾತೆ ಸಚಿವೆ ಸಾವಿತ್ರಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ವೇಳೆ ಬಿಳಿ ಬೋರ್ಡ್‌ ಮೇಲೆ ದೇವನಾಗರಿ ಲಿಪಿಯಲ್ಲಿ ‘ಬೇಟಿ ಬಚಾವೊ– ಬೇಟಿ ಪಡಾವೊ’ ಘೋಷ ವಾಕ್ಯವನ್ನು ‘ಬೇಡಿ ಪಡಾವೊ–ಬಚಾವೊ’ ಎಂದು ತಪ್ಪಾಗಿ ಬರೆದಿದ್ದಾರೆ ಎನ್ನಲಾಗಿದೆ.

ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಪ್ರತಿಪಕ್ಷಗಳ ನಾಯಕರು ಟೀಕಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಕನಿಷ್ಠ ಶಿಕ್ಷಣದ ಅರ್ಹತೆಯನ್ನು ನಿಗದಿ ಪಡಿಸಬೇಕು ಎಂದು ಕಾಂಗ್ರೆಸ್‌ ಹಿರಿಯ ನಾಯಕ ಕೆ.ಕೆ. ಮಿಶ್ರಾ ವ್ಯಂಗ್ಯವಾಡಿದ್ದಾರೆ.

ಸಾವಿತ್ರಿ ಅವರು ಬರೆಯುತ್ತಿರುವ ವಿಡಿಯೊವನ್ನು ಸ್ವಾತಿ ದೀಕ್ಷಿತ್‌ ಎನ್ನುವವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ‘ಕೇಂದ್ರ ಸಚಿವೆ ಸಾವಿತ್ರಿ ಠಾಕೂರ್‌ ಅವರು ಶಿಕ್ಷಣದ ಕುರಿತಾದ ಘೋಷ ವಾಕ್ಯವನ್ನೇ ತಪ್ಪಾಗಿ ಬರೆದಿದ್ದಾರೆ. ಚುನಾವಣಾ ಅಫಿಡವಿಟ್‌ ಪ್ರಕಾರ ಅವರು 12ನೇ ತರಗತಿ ತೇರ್ಗಡೆಯಾಗಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT