ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಹೊಸತಾಗಿ ಐದು ಜಿಲ್ಲೆಗಳನ್ನು ರಚಿಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಘೋಷಿಸಿದರು.
‘ಅಭಿವೃದ್ಧಿ ಹೊಂದಿದ ಹಾಗೂ ಸಮೃದ್ಧ ಲಡಾಖ್ ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಂತೆ ಕೇಂದ್ರ ಗೃಹಸಚಿವಾಲಯವು ಐದು ಜಿಲ್ಲೆಗಳನ್ನು ರಚಿಸಿದೆ’ ಎಂದು ಶಾ ಅವರು ‘ಎಕ್ಸ್’ ಮೂಲಕ ತಿಳಿಸಿದ್ದಾರೆ.
‘ಹೊಸ ಜಿಲ್ಲೆಗಳಿಗೆ ಜನ್‌ಸ್ಕಾರ್, ದ್ರಾಸ್, ಶಾಮ್, ನುಬ್ರಾ ಹಾಗೂ ಚಾಂಗ್‌ಥಾಂಗ್ ಎಂದು ನಾಮಕರಣ ಮಾಡಲಾಗಿದ್ದು, ಸರ್ಕಾರದ ಎಲ್ಲ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಲಿವೆ’ ಎಂದಿದ್ದಾರೆ.
‘ಲಡಾಖ್‌ನ ಜನರಿಗೆ ಅಪರಿಮಿತ ಅವಕಾಶಗಳನ್ನು ಸೃಷ್ಟಿಸಲು ಸರ್ಕಾರ ಬದ್ಧವಾಗಿದೆ’ ಎಂದು ಶಾ ಭರವಸೆ ನೀಡಿದ್ದಾರೆ.
2019ರ ಆಗಸ್ಟ್ 5ರಂದು ಜಮ್ಮು ಮತ್ತು ಕಾಶ್ಮೀರವನ್ನು ವಿಭಜಿಸಿ ಲಡಾಖ್, ಜಮ್ಮು ಮತ್ತು ಕಾಶ್ಮೀರ ಎಂದು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಿಸಲಾಯಿತು. ಅದೇ ದಿನ, ಸಂವಿಧಾನದ 370ನೇ ವಿಧಿ ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಲಾಗಿತ್ತು.
ಕೇಂದ್ರಾಡಳಿತ ಪ್ರದೇಶವಾಗಿ ಲಡಾಖ್ ಬದಲಾದ ಬಳಿಕ ಅಲ್ಲಿನ ಆಡಳಿತ ವ್ಯವಸ್ಥೆಯು ನೇರವಾಗಿ ಕೇಂದ್ರ ಗೃಹಸಚಿವಾಲಯದ ವ್ಯಾಪ್ತಿಗೆ ಒಳಪಟ್ಟಿದೆ.
ಇದುವರೆಗೆ ಲಡಾಕ್‌ಖ್‌ನಲ್ಲಿ ಲೇಹ್, ಕಾರ್ಗಿಲ್ ಜಿಲ್ಲೆಗಳಷ್ಟೇ ಇದ್ದವು. ಹೊಸ ಐದು ಜಿಲ್ಲೆಗಳ ರಚನೆಯಿಂದ ಸಂಖ್ಯೆಯು 7ಕ್ಕೆ ಏರಿದಂತಾಗಿದೆ.
ಹಾಗೆಯೇ, 'ಲಡಾಖ್ ಜನರಿಗೆ ಹೇರಳ ಅವಕಾಶಗಳನ್ನು ಕಲ್ಪಿಸಲು ಮೋದಿ ಸರ್ಕಾರ ಬದ್ಧವಾಗಿದೆ' ಎಂದೂ ಹೇಳಿದ್ದಾರೆ.
In pursuit of PM Shri @narendramodi Ji's vision to build a developed and prosperous Ladakh, the MHA has decided to create five new districts in the union territory. The new districts, namely Zanskar, Drass, Sham, Nubra and Changthang, will take the benefits meant for the people…
— Amit Shah (@AmitShah) August 26, 2024
ಚುನಾವಣೆ ಹೊತ್ತಲ್ಲಿ ಕ್ರಮ
ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರವು 2019ರ ಆಗಸ್ಟ್ 5ರಂದು ರದ್ದುಪಡಿಸಿತ್ತು. ಜೊತೆಗೆ, ರಾಜ್ಯವನ್ನು 'ಜಮ್ಮು ಮತ್ತು ಕಾಶ್ಮೀರ' ಹಾಗೂ 'ಲಡಾಖ್' ಎಂದು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು.
ಇದೀಗ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಅಲ್ಲಿನ 90 ವಿಧಾನಸಭಾ ಕ್ಷೇತ್ರಗಳಿಗೆ ಸೆಪ್ಟೆಂಬರ್ 18, 25 ಹಾಗೂ ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಈ ಬೆಳವಣಿಗೆ ನಡುವೆ ಲಡಾಖ್‌ನಲ್ಲಿ ಹೊಸ ಜಿಲ್ಲೆಗಳನ್ನು ರಚಿಸುವ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.
ಇದರಿಂದಾಗಿ ಲಡಾಖ್‌ನಲ್ಲಿ ಜಿಲ್ಲೆಗಳ ಸಂಖ್ಯೆ 7ಕ್ಕೆ ಏರಲಿದೆ. ಈವರೆಗೆ ಕಾರ್ಗಿಲ್ ಮತ್ತು ಲೇಹ್ ಮಾತ್ರವೇ ಇದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.