ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶವನ್ನು ಒಗ್ಗೂಡಿಸುವುದು ನಿಜವಾದ ದೇಶಭಕ್ತಿ: ರಾಹುಲ್ ಗಾಂಧಿ

Published 17 ಫೆಬ್ರುವರಿ 2024, 10:23 IST
Last Updated 17 ಫೆಬ್ರುವರಿ 2024, 10:23 IST
ಅಕ್ಷರ ಗಾತ್ರ

ವಾರಾಣಸಿ (ಉತ್ತರ ಪ್ರದೇಶ): ದೇಶವನ್ನು ಒಗ್ಗೂಡಿಸುವುದು ನಿಜವಾದ ದೇಶಭಕ್ತಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಉತ್ತರ ಪ್ರದೇಶದಲ್ಲಿ ಇಂದು (ಶನಿವಾರ) ಭಾರತ ಜೋಡೊ ನ್ಯಾಯ ಯಾತ್ರೆಯ ಎರಡನೇ ದಿನದಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪಕ್ಷದ ರಾಜ್ಯಾಧ್ಯಕ್ಷ ಅಜಯ್ ರೈ ಮತ್ತು ಇತರ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್‌ ಗಾಂಧಿ ತೆರೆದ ಜೀಪಿನಲ್ಲಿ ಗೊಡೌಲಿಯಾ ಪ್ರದೇಶದಲ್ಲಿ ಪ್ರವಾಸ ಮಾಡಿದರು. ಬಳಿಕ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು.

ನಂತರ ಗೊಡೌಲಿಯಾದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಭಾರತವು ಪ್ರೀತಿಯ ದೇಶ. ದ್ವೇಷದ ದೇಶವಲ್ಲ. ಸಹೋದರರ ನಡುವಿನ ಸಂಘರ್ಷದಿಂದ ದೇಶ ದುರ್ಬಲವಾಗುತ್ತದೆ. ದೇಶವನ್ನು ಒಗ್ಗೂಡಿಸುವುದೇ ನಿಜವಾದ ದೇಶಭಕ್ತಿ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT