ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರ್ಭಪಾತ: ಅವಿವಾಹಿತೆಗೂ ಅವಕಾಶ- ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Last Updated 21 ಜುಲೈ 2022, 15:52 IST
ಅಕ್ಷರ ಗಾತ್ರ

ನವದೆಹಲಿ: ಮಹಿಳೆ ಅವಿವಾಹಿತೆ ಎಂಬ ಕಾರಣಕ್ಕೆ ಗರ್ಭಪಾತದ ಅವಕಾಶ ನಿರಾಕರಿಸುವಂತಿಲ್ಲ ಎಂದುಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರಿದ್ದ ಪೀಠವು, ವೈದ್ಯಕೀಯ ಗರ್ಭಪಾತ ಕಾಯ್ದೆಗೆ 2021ರಲ್ಲಿ ತಂದಿರುವ ತಿದ್ದುಪಡಿಯು ಅವಿವಾಹಿತೆಯೂ ಒಳಗೊಳ್ಳುವಂತೆ ಪತಿಗೆ ಬದಲಾಗಿ ‘ಪಾರ್ಟ್ನರ್’ ಎಂಬ ಪದ ಬಳಸಿದೆ ಎಂದು ಹೇಳಿತು.

ಸಹಮತದ ಸಂಬಂಧದಿಂದ ಗರ್ಭಿಣಿಯಾಗಿದ್ದ 25 ವರ್ಷದ ಅವಿವಾಹಿತೆ, ತನಗೆ ಬೇಡವಾದ24 ವಾರಗಳ ಭ್ರೂಣದ ಗರ್ಭಪಾತಕ್ಕೆ ಕೋರಿ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಜುಲೈ 16ರಂದು ತಳ್ಳಿ ಹಾಕಿತ್ತು. ಇದನ್ನು ಪ್ರಶ್ನಿಸಿ ಅವಿವಾಹಿತೆ, ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ಎಂಟಿಪಿ ಕಾಯ್ದೆಯ ಸೆಕ್ಷನ್‌3(2)(ಡಿ) ಅಡಿಯಲ್ಲಿ ವೈದ್ಯಕೀಯ ಮಂಡಳಿ ಸ್ಥಾಪಿಸಲು ದೆಹಲಿಯ ಏಮ್ಸ್ ಮುಖ್ಯಸ್ಥರಿಗೆ ಸೂಚಿಸಿದ ಪೀಠವು, ಆಕೆಯ ಜೀವಕ್ಕೆ ತೊಂದರೆಯಾಗದಂತೆ ಗರ್ಭಪಾತ ಮಾಡಿಸಲು ಆದೇಶಿಸಿತು.

ವಾಸ್ತವವಾಗಿ, 20-24 ವಾರಗಳ ಭ್ರೂಣದ ಗರ್ಭಪಾತಕ್ಕೆ ವಿಧವೆ ಅಥವಾ ವಿಚ್ಛೇದಿತಮಹಿಳೆಗೂ ಅನುಮತಿಸಲಾಗಿದೆ. ಆದರೆ, ಈ ಪ್ರಕರಣದಲ್ಲಿ ಹೈಕೋರ್ಟ್ ಅನಪೇಕ್ಷಿತ ದೃಷ್ಟಿಕೋನ ಹೊಂದಿದೆ ಎಂದಿರುವ ಸುಪ್ರೀಂ ಕೋರ್ಟ್, ಈ ಕಾನೂನು ನಿಯಮಗಳ ವ್ಯಾಖ್ಯಾನ ಕುರಿತು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT