ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ನಾವ್‌ ಅತ್ಯಾಚಾರ ಪ್ರಕರಣ: ಅತುಲ್‌‌ ಸೆಂಗಲ್‌ಗೆ ಚಿಕಿತ್ಸೆ ಕೊಡಿಸಲು ನಿರ್ದೇಶನ

ಬಾಯಿ ಕ್ಯಾನ್ಸರ್‌ ಪೀಡಿತರಾಗಿರುವ ಅತುಲ್‌ ಸೆಂಗಲ್‌
Last Updated 18 ಆಗಸ್ಟ್ 2020, 11:00 IST
ಅಕ್ಷರ ಗಾತ್ರ

ನವದೆಹಲಿ: ಉನ್ನಾವ್‌ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿರುವ ಅತುಲ್‌ ಸಿಂಗ್‌ ಸೆಂಗಲ್‌ನ ಬಾಯಿ ಕ್ಯಾನ್ಸರ್‌ಗೆ ಚಿಕಿತ್ಸೆ ಕೊಡಿಸಬೇಕು ಎಂದು ದೆಹಲಿ ಹೈಕೋರ್ಟ್‌ ಮಂಗಳವಾರ ಜೈಲು ಅಧಿಕಾರಿಗಳಿಗೆನಿರ್ದೇಶನ ನೀಡಿದೆ.

ಆರೋಗ್ಯ ಸಮಸ್ಯೆಗಳಿಗೆ ಕಾನ್ಪುರದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲು 8 ವಾರಗಳ ಪೆರೋಲ್‌ ಕೋರಿ ಈ ಹಿಂದೆ ಅತುಲ್‌ ಸಿಂಗ್‌ ಅರ್ಜಿ ಸಲ್ಲಿಸಿದ್ದರು. ಬಳಿಕ ಆ.13 ರಂದು ವಿಚಾರಣೆ ವೇಳೆ ಅತುಲ್‌ಗೆ ಬಾಯಿ ಕ್ಯಾನ್ಸರ್‌ ಇದೆ ಎಂದು ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಈ ಸಂಬಂಧ ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಾಲಯವು, ದೆಹಲಿ ಸರ್ಕಾರದ ಸಲಹೆಯೊಂದಿಗೆ ಅಪರಾಧಿ ಅತುಲ್‌ ಸಿಂಗ್‌ಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡುವಂತೆ ಜೈಲಿನ ಅಧಿಕಾರಿಗಳಿಗೆ ನಿರ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT