ಮುಂಬೈ: ಕರ್ನಾಟಕ ನಮ್ಮ ಆಡಳಿತದೊಂದಿಗೆ ಚರ್ಚೆಯಲ್ಲಿ ತೊಡಗುವವರೆಗೆ, ರಾಜ್ಯದಿಂದ ಕರ್ನಾಟಕಕ್ಕೆ ತೆರಳುವ ಸರ್ಕಾರಿ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಹೇಳಿದ್ದಾರೆ.

ನಡೆದಿರುವ ಘಟನೆಗಳ ಕುರಿತಂತೆ ಕರ್ನಾಟಕ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳುವವರೆಗೆ ಮತ್ತು ನಮ್ಮ ಆಡಳಿತದೊಂದಿಗೆ ಚರ್ಚೆಯಲ್ಲಿ ತೊಡಗುವವರೆಗೆ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ನಡುವೆ, ಪುಣೆಯಲ್ಲಿ ಶಿವಸೇನಾ (ಯುಬಿಟಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರ್ನಾಟಕದ ನಂಬರ್ ಪ್ಲೇಟ್ಗಳನ್ನು ಹೊಂದಿರುವ ಬಸ್ಗಳಿಗೆ ಕಪ್ಪು ಬಸಿ ಹಚ್ಚಿದರು

ಬೆಳಗಾವಿ ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ವಾಯವ್ಯ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕ ಮತ್ತು ಚಾಲಕ ಮೇಲಿನ ಹಲ್ಲೆ ಪ್ರಕರಣದಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಬಸ್ಗಳ ಸಂಚಾರ ವ್ಯತ್ಯಯವಾಗಿದೆ. ಶನಿವಾರ ಸಂಜೆ 7ರ ಬಳಿಕ ಎರಡೂ ಕಡೆಯ ಬಸ್ಗಳ ಸಂಚಾರ ಗಡಿಯವರೆಗೆ ಮಾತ್ರ ಸೀಮಿತಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.