ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗ್ರಾ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 5 ವರ್ಷದ ಮಗು

ಫತೇಹಾಬಾದ್‌ನ ನಿಬೋಹರಾ ಸಮೀಪದ ಹಳ್ಳಿಯಲ್ಲಿ ಘಟನೆ; ಮುಂದುವರಿದ ರಕ್ಷಣಾ ಕಾರ್ಯಾಚರಣೆ
Last Updated 14 ಜೂನ್ 2021, 8:16 IST
ಅಕ್ಷರ ಗಾತ್ರ

ಆಗ್ರಾ: ಇಲ್ಲಿನ ಧರಿಯೈ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಆಟವಾಡುತ್ತಿದ್ದ ಐದು ವರ್ಷದ ಮಗುವೊಂದು 150 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದು, ಮಗುವನ್ನು ಮೇಲೆತ್ತುವ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫತೇಹಾಬಾದ್‌ನ ನಿಬೋಹರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಈ ಘಟನೆ ನಡೆದಿದೆ. ಇಲ್ಲಿಯವರೆಗೆ, ಕೊಳವೆಬಾವಿಯೊಳಗಿರುವ ಮಗುವಿನ ಚಲನೆಯನ್ನು ಗುರುತಿಸಲು ಸಾಧ್ಯವಾಗಿದೆ‘ ಎಂದು ಪೊಲೀಸ್ ಅಧಿಕಾರಿ ಸೂರಜ್ ಪ್ರಸಾದ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

‘ಘಟನೆಯ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ‘ ಎಂದು ಸೂರಜ್ ತಿಳಿಸಿದ್ದಾರೆ.

‘ತಂದೆ ಛೋಟೆಲಾಲ್‌ ಕೊರೆಸಿದ ಕೊಳವೆ ಬಾವಿಯಲ್ಲೇ ಮಗು ಬಿದ್ದಿದೆ‘ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

‘ನಾವು ಕೊಳವೆಬಾವಿಗೆ ಹಗ್ಗ ಬಿಟ್ಟಿದ್ದೆವು. ಆಗ ಮಗು ಅದನ್ನು ಹಿಡಿದುಕೊಂಡು, ನಮ್ಮ ಮಾತುಗಳಿಗೆ ಪ್ರತಿಕ್ರಿಯಿಸುತ್ತಿತ್ತು ‘ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT