ಲಖಿಂಪುರ ಖೇರಿ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಬುಧವಾರ ಖಾಸಗಿ ಬಸ್ ಮತ್ತು ಮಿನಿ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾಗಿದ್ದು, 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಧೌರ್ಹರಾದಿಂದ ಲಖನೌಗೆ ತೆರಳುತ್ತಿದ್ದ ಬಸ್, ರಾಷ್ಟ್ರೀಯ ಹೆದ್ದಾರಿ 730ರಲ್ಲಿನ ಐರಾ ಸೇತುವೆ ಕಡೆಯಿಂದ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮಿನಿ ಟ್ರಕ್‌ವೊಂದಕ್ಕೆ ಡಿಕ್ಕಿ ಹೊಡೆದಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರೀತಂಪಾಲ್ ಸಿಂಗ್ ತಿಳಿಸಿದ್ದಾರೆ.

ಬಸ್ ಅಪಘಾತದ ಸುದ್ದಿ ತಿಳಿದು ತಕ್ಷಣವೇ ಸ್ಥಳಕ್ಕೆ ತೆರಳಿದ ಪೊಲೀಸರು, ಗ್ಯಾಸ್ ಕಟ್ಟರ್‌ನಿಂದ ಬಸ್ ಅನ್ನು ಕತ್ತರಿಸಿ ಗಾಯಾಳುಗಳನ್ನು ರಕ್ಷಿಸಿದರು. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಗುರುತು ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ.

ಅಪಘಾತದಲ್ಲಿ ಮಡಿದವರ ಬಗ್ಗೆ ಸಂತಾಪ ಸೂಚಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಾಳುಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯ ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.