ಲಖನೌ: ಉತ್ತರ ಪ್ರದೇಶದ ಬಜೆಟ್ ಅಧಿವೇಶನದ ಮೊದಲ ದಿನ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಅವರು ಭಾಗವಹಿಸಲಿಲ್ಲ. ಅಲ್ಲದೆ, ಸೋಮವಾರ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರ ಭಾಷಣ ಮಾಡುವ ವೇಳೆಯೇ ಸಮಾಜವಾದಿ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಸದನ ಆರಂಭವಾಗುತ್ತಿದ್ದಂತೆ ಕಾನೂನು ಸುವ್ಯವಸ್ಥೆ, ರೈತರು ಹಾಗೂ ಅತ್ಯಾಚಾರ ಘಟನೆಗೆ ಸಂಬಂಧಿಸಿದ ಫಲಕಗಳನ್ನು ಹಿಡಿದು, ಸದನದ ಬಾವಿಗೆ ಧುಮುಕಿದ ಎಸ್‌ಪಿ ಸದಸ್ಯರು, ‘ರಾಜ್ಯಪಾಲರೇ ವಾಪಸ್ ಹೋಗಿ’ ಎಂಬ ಘೋಷಣೆಗಳನ್ನು ಕೂಗಿದರು. ಆದಾಗ್ಯೂ, ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು, 15 ನಿಮಿಷಗಳ ಕಾಲ ತಮ್ಮ ಭಾಷಣವನ್ನು ಓದಿ ಮುಗಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.