ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉ.ಪ್ರ: BJP ಸಂಸದ ಉಪೇಂದ್ರ ಸಿಂಗ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಬಹಿರಂಗ

ಅಪರಿಚಿತ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲು
Published 4 ಮಾರ್ಚ್ 2024, 3:12 IST
Last Updated 4 ಮಾರ್ಚ್ 2024, 3:12 IST
ಅಕ್ಷರ ಗಾತ್ರ

ಬಾರಾಬಂಕಿ (ಉತ್ತರ ಪ್ರದೇಶ): ಬಾರಾಬಂಕಿ ಬಿಜೆಪಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿಹಾಡುತ್ತಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸಂಸದರ ಆಪ್ತ ಕಾರ್ಯದರ್ಶಿ ದಿನೇಶ್ ಚಂದ್ರ ರಾವತ್ ಅವರ ದೂರಿನ ಮೇರೆಗೆ ಅಪರಿಚಿತ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಆದಿತ್ಯ ತ್ರಿಪಾಠಿ ತಿಳಿಸಿದ್ದಾರೆ.

ಮುಂಬಲಿರುವ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಉಪೇಂದ್ರ ಸಿಂಗ್ ರಾವತ್ ಅವರನ್ನು ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ ‌ಒಂದು ದಿನದ ಬಳಿಕ ಈ ಘಟನೆ ನಡೆದಿದೆ. ಸಂಸದರ ವರ್ಚಸ್ಸನ್ನು ಹಾಳು ಮಾಡಲು ಕೆಲವರು ಅವರ ಆಕ್ಷೇಪಾರ್ಹ ವಿಡಿಯೊವನ್ನು ಹರಿಬಿಟ್ಟಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಪುರುಷನೊಬ್ಬ ಮಹಿಳೆಯೊಂದಿಗೆ ಅಶ್ಲೀಲವಾಗಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ವಿಡಿಯೊದಲ್ಲಿರುವ ವ್ಯಕ್ತಿ ಉಪೇಂದ್ರ ಸಿಂಗ್ ರಾವತ್ ಎಂದು ಹೇಳಲಾಗುತ್ತಿದೆ.

'ನಾನು ಬಾರಾಬಂಕಿಯಿಂದ ಪಕ್ಷದ ಟಿಕೆಟ್ ಪಡೆದ ತಕ್ಷಣ, ನನ್ನ ವಿರೋಧಿಗಳು ಈ ಕೃತ್ಯ ಎಸಗಿದ್ದಾರೆ ಎಂದು ರಾವತ್ ಆರೋಪಿಸಿದ್ದಾರೆ. ಅಲ್ಲದೇ ಇದು ಸಂಪೂರ್ಣವಾಗಿ ತಿರುಚಿದ ವಿಡಿಯೊ' ಎಂದು ಅವರು ಹೇಳಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿಯು ಆಗಿನ ಹಾಲಿ ಸಂಸದ ಪ್ರಿಯಾಂಕಾ ಸಿಂಗ್ ರಾವತ್‌ಗೆ ಟಿಕೆಟ್ ನಿರಾಕರಿಸಿ ಉಪೇಂದ್ರ ಸಿಂಗ್ ರಾವತ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT