ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನಾಕಾರರಿಗೆ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ಸಂಬಂಧಿಸಿ ನೀಡಲಾಗಿದ್ದ ನೋಟಿಸ್‌ಗಳನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹಿಂಪಡೆದಿದೆ.

2019ರ ಡಿಸೆಂಬರ್‌ನಲ್ಲಿ ನಡೆದಿದ್ದ ಸಿಎಎ ವಿರೋಧಿ ಪ್ರತಿಭಟನೆಗಳ ಸಂದರ್ಭ ಸಾರ್ವಜನಿಕ ಆಸ್ತಿ–ಪಾಸ್ತಿಗೆ ಹಾನಿ ಮಾಡಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಉತ್ತರ ಪ್ರದೇಶ ಸರ್ಕಾರ ನೋಟಿಸ್‌ಗಳನ್ನು ನೀಡಿತ್ತು.

ಇದಕ್ಕೆ ಸುಪ್ರೀಂ ಕೋರ್ಟ್ ಕಳೆದ ವಾರ ಅಸಮಾಧಾನ ವ್ಯಕ್ತಪಡಿಸಿತ್ತು. ಸರ್ಕಾರವು ಸರಿಯಾದ ಕ್ರಮವನ್ನು ಅನುಸರಿಸಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿತ್ತು. ಇದರ ಬೆನ್ನಲ್ಲೇ, ಎಲ್ಲ ನೋಟಿಸ್‌ಗಳನ್ನು ಹಿಂಪಡೆಯಲಾಗಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:ಗಲಭೆ ಹಾನಿಗೆ ಆರೋಪಿಗಳ ಆಸ್ತಿ ಮುಟ್ಟುಗೋಲು, ನಷ್ಟ ವಸೂಲಿ: ಉ.ಪ್ರ. ಸುಗ್ರೀವಾಜ್ಞೆ

ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ವಿವಿಧ ಜಿಲ್ಲೆಗಳ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟರು 274 ನೋಟಿಸ್‌ಗಳನ್ನು ನೀಡಿದ್ದರು. ಈ ಪೈಕಿ ಲಖನೌದಲ್ಲಿ 95 ನೋಟಿಸ್ ನೀಡಲಾಗಿತ್ತು.

‘ನೀವು ದೂರುದಾರರಾಗಿದ್ದೀರಿ, ನೀವೇ ಸಾಕ್ಷಿಯೂ ಆಗಿದ್ದೀರಿ, ನೀವೇ ಪ್ರಾಸಿಕ್ಯೂಟರ್ ಸಹ ಆಗಿದ್ದೀರಿ... ಬಳಿಕ ನೀವೇ ಜನರ ಆಸ್ತಿ ಮುಟ್ಟುಗೋಲು ಹಾಕಲು ಮುಂದಾಗುತ್ತೀರಿ. ಯಾವುದೇ ಕಾನೂನು ಇದಕ್ಕೆ ಅನುಮತಿ ನೀಡುತ್ತದೆಯೇ’ ಎಂದು ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠ ಸರ್ಕಾರದ ಕಾನೂನು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿತ್ತು.

2019ರ ಡಿಸೆಂಬರ್‌ನಲ್ಲಿ ಉತ್ತರ ಪ್ರದೇಶದಲ್ಲಿ ನಡೆದಿದ್ದ ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಲವೆಡೆ ಸಾರ್ವಜನಿಕ ಆಸ್ತಿ–ಪಾಸ್ತಿಗೆ ಹಾನಿಯಾಗಿತ್ತು. ಈ ಹಾನಿಯನ್ನು ಪ್ರತಿಭಟನಾಕಾರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಸರಿಪಡಿಸಿಕೊಳ್ಳುವುದಾಗಿ ಸರ್ಕಾರ ಘೋಷಿಸಿತ್ತು.

ಇದನ್ನೂ ಓದಿ:ದೆಹಲಿ ಗಲಭೆಗಾಗಿ ಸ್ವಂತದ ₹1.5 ಕೋಟಿಯನ್ನು ಕಪ್ಪುಹಣವಾಗಿಸಿದ್ದ ಎಎಪಿ ಕೌನ್ಸಿಲರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.