ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಪ್ರಕರಣ: ಜೂ. 7ರಂದು ವಿಚಾರಣೆ

Published 27 ಮೇ 2024, 13:54 IST
Last Updated 27 ಮೇ 2024, 13:54 IST
ಅಕ್ಷರ ಗಾತ್ರ

ಸುಲ್ತಾನ್‌ಪುರ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ 2018ರಲ್ಲಿ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಜೂನ್ 7ಕ್ಕೆ ನಿಗದಿಪಡಿಸಿದೆ. 

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ರಾಹುಲ್ ಗಾಂಧಿ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ವಿಜಯ್ ಮಿಶ್ರಾ ಈ ಪ್ರಕರಣ ದಾಖಲಿಸಿದ್ದರು.  

ರಾಹುಲ್ ಪರ ವಾದ ಮಂಡಿಸಿದ ವಕೀಲ ಕಾಶಿ ಪ್ರಸಾದ್ ಶುಕ್ಲಾ ಅವರು, ರಾಹುಲ್ ಗಾಂಧಿ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಸಕ್ರಿಯರಾಗಿದ್ದು, ಕೋರ್ಟ್‌ನಲ್ಲಿ ವಿಚಾರಣೆಗೆ ಹಾಜರಾಗಲು ಅವರಿಗೆ ಸಮಯಾವಕಾಶ ಬೇಕಿದೆ ಎಂದು ಅರ್ಜಿ ಸಲ್ಲಿಸಿದರು. ಇದನ್ನು ಪರಿಗಣಿಸಿದ ನ್ಯಾಯಾಧೀಶ ಶುಭಂ ವರ್ಮಾ, ಈ ಕುರಿತ ವಿಚಾರಣೆಯನ್ನು ಜೂನ್ 7ಕ್ಕೆ ನಿಗದಿಪಡಿಸಿದರು. 

ಇದಕ್ಕೂ ಮುನ್ನ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಸಂತೋಷ್ ಕುಮಾರ್, ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT