ಲಖನೌ: 2005ರಲ್ಲಿ 16 ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮೂವರು ಅಪರಾಧಿಗಳಿಗೆ ಉತ್ತರ ಪ್ರದೇಶದ ಮಹಾರಾಜ್ಗಂಜ್ನ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ಆದೇಶ ಪ್ರಕಟಿಸಿದೆ.

ವಿಶೇಷ ನ್ಯಾಯಾಧೀಶ ಸಂಜಯ್ ಮಿಶ್ರಾ ಅವರು, ಅಪರಾಧಿಗಳಾದ ಅಮ್ಜಾದ್ (46), ಸಂಶಾದ್ (48) ಮತ್ತು ಇರ್ಷಾದ್ (51) ಅವರಿಗೆ ತಲಾ ₹35,000 ದಂಡ ವಿಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

2005ರಲ್ಲಿ ಮೂವರು ಆರೋಪಿಗಳು 16 ವರ್ಷದ ಬಾಲಕಿಗೆ ಆಮಿಷವೊಡ್ಡಿ, ನೇಪಾಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಸಂತ್ರಸ್ತೆಯ ಅಣ್ಣನ ದೂರನ್ನು ಆಧರಿಸಿ 2005ರ ಜನವರಿ 15ರಂದು ಎಸ್ಸಿ,ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
.ದೆಹಲಿ | ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ: ತೀವ್ರ ತಪಾಸಣೆ.ದೆಹಲಿ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿ ಅರುಣ್ ಜೇಟ್ಲಿ ಮಗ ರೋಹನ್ ಜೇಟ್ಲಿ ಮರುಆಯ್ಕೆ.ಪ್ರಿಯಾಂಕಾಗೆ ಪ್ಯಾಲೆಸ್ಟೀನ್, ಬಾಂಗ್ಲಾ ಮೇಲಿರುವ ಪ್ರೀತಿ ಭಾರತದ ಮೇಲಿಲ್ಲ: ಸಿಂಗ್.ಸೋನಿಯಾ ಗಾಂಧಿ ಆಪ್ತ ಸಹಾಯಕ ಮಾಧವನ್ ನಿಧನ: ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.