ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ | ಭೂ ಮಾಫಿಯಾ: 10 ಕಡೆಗಳಲ್ಲಿ ಇ.ಡಿ ದಾಳಿ

Published 9 ಜನವರಿ 2024, 10:26 IST
Last Updated 9 ಜನವರಿ 2024, 10:26 IST
ಅಕ್ಷರ ಗಾತ್ರ

ಲಖನೌ: ಭೂ ಮಾಫಿಯಾಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಉತ್ತರ ಪ್ರದೇಶದ ಬುಲಂದ್‌ಶಹರ್ ಮತ್ತು ಹತ್ತಿರದ 10 ಕಡೆಗಳಲ್ಲಿ ಮಂಗಳವಾರ ದಾಳಿ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ಆರೋಪಿ ಸುಧೀರ್ ಕುಮಾರ್ ಗೋಯಲ್ ಮತ್ತು ಸಂಬಂಧಿತ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ.

ಆರೋಪಿಗಳ ವಿರುದ್ಧ ಉತ್ತರ ಪ್ರದೇಶದ ಪೊಲೀಸರು 18 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಇ.ಡಿ ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ.

ಗೋಯಲ್ ಹಾಗೂ ಸಂಬಂಧಿತ ಸಂಸ್ಥೆಗಳು ನಕಲಿ ದಾಖಲೆ ಸೃಷ್ಟಿಸಿ ಫ್ಲ್ಯಾಟ್‌ಗಳನ್ನು ಮಾರಾಟ ಮಾಡುವ ನೆಪದಲ್ಲಿ ₹100 ಕೋಟಿಗೂ ಅಧಿಕ ವಂಚನೆ ನಡೆಸಿದೆ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT