ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉ.ಪ್ರದೇಶ ಚುನಾವಣೆ: ಟಿಕೆಟ್ ಆಕಾಂಕ್ಷಿಗಳಿಂದ ₹ 11,000 ಠೇವಣಿ ಕೇಳಿದ ಕಾಂಗ್ರೆಸ್

Last Updated 15 ಸೆಪ್ಟೆಂಬರ್ 2021, 9:52 IST
ಅಕ್ಷರ ಗಾತ್ರ

ಲಖನೌ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ಬಯಸುವವರು ತಮ್ಮ ಅರ್ಜಿಯೊಂದಿಗೆ ₹ 11,000 ಠೇವಣಿ ಇಡುವಂತೆ ಉತ್ತರ ಪ್ರದೇಶ ಕಾಂಗ್ರೆಸ್ ಹೇಳಿದೆ. ಠೇವಣಿ ಇಡುವ ಈ ಕ್ರಮವು ಚುನಾವಣೆ ಬಗ್ಗೆ ಗಂಭೀರವಾಗಿಲ್ಲದ ಅಭ್ಯರ್ಥಿಗಳನ್ನು ದೂರವಿಡುವ ಉದ್ದೇಶ ಹೊಂದಿದೆ ಎಂದು ಹೇಳಿದೆ.

'ಎಲ್ಲ ಅರ್ಜಿದಾರರು ಠೇವಣಿ ಮೊತ್ತ ₹ 11,000 ದೊಂದಿಗೆ ತಮ್ಮ ಅರ್ಜಿಗಳನ್ನು ಜಿಲ್ಲಾ ಅಥವಾ ರಾಜ್ಯ ಮಟ್ಟದ ಅಧಿಕೃತ ವ್ಯಕ್ತಿಗೆ ಸೆಪ್ಟೆಂಬರ್ 25ರೊಳಗೆ ಸಲ್ಲಿಸಬೇಕು' ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ (ಯುಪಿಸಿಸಿ) ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಮಂಗಳವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಕಳೆದ ವಾರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಎರಡು ದಿನಗಳ ಕಾಲ ನಡೆದ ಚಿಂತನಶೀಲ ಅಧಿವೇಶನದ ನಂತರ ಪಕ್ಷವು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿತ್ತು.

'ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿರುವ ಕಾರ್ಯಕರ್ತರು ರಾಜ್ಯ ಅಥವಾ ಜಿಲ್ಲಾ ಕೇಂದ್ರದಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು' ಎಂದು ಕಾಂಗ್ರೆಸ್ ವಕ್ತಾರೆ ಡಾ. ಉಮಾ ಶಂಕರ್ ಪಾಂಡೆ ತಿಳಿಸಿದ್ದಾರೆ.

ಪಕ್ಷದ ಈ ಕ್ರಮವು ಚುನಾವಣೆ ಬಗ್ಗೆ ಗಂಭೀರವಾಗಿಲ್ಲದ ಅಭ್ಯರ್ಥಿಗಳನ್ನು ಪರೀಕ್ಷಿಸಲು ಉದ್ದೇಶಿಸಲಾಗಿದೆ. ಇದು ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳದ ಜನರನ್ನು ತಡೆಯುತ್ತದೆ. ಠೇವಣಿ ಇಡುವಂತೆ ಕೇಳುವುದರಲ್ಲಿ ಹೊಸದೇನಿಲ್ಲ ಎಂದು ಪಕ್ಷದ ವಕ್ತಾರ ಅಶೋಕ್ ಸಿಂಗ್ ಹೇಳಿದ್ದಾರೆ.

'ಎಲ್ಲಾ ಪಕ್ಷಗಳು ಠೇವಣಿಯಾಗಿ ಹಣ ತೆಗೆದುಕೊಳ್ಳುತ್ತವೆ ಮತ್ತು ಅದನ್ನು ತಮ್ಮ ಪಕ್ಷದ ಖಾತೆಗಳಲ್ಲಿಡುತ್ತವೆ. ಕೆಲವರು ಟಿಕೆಟ್ ಹಂಚಿಕೆಗಾಗಿ ವೈಯಕ್ತಿಕವಾಗಿ ದೊಡ್ಡ ಮೊತ್ತವನ್ನು ತೆಗೆದುಕೊಳ್ಳುತ್ತಾರೆ ಮತ್ತು ಅದಕ್ಕಾಗಿಯೇ ಅವರು ಕುಖ್ಯಾತಿ ಪಡೆದಿದ್ದಾರೆ' ಎಂದಿದ್ದಾರೆ.

ಆರ್‌ಟಿಜಿಎಸ್, ಡಿಮ್ಯಾಂಡ್ ಡ್ರಾಫ್ಟ್ ಅಥವಾ ಪೇ ಆರ್ಡರ್ ಮೂಲಕ ಠೇವಣಿ ಇಡಬಹುದು ಮತ್ತು ರಸೀದಿಯನ್ನು ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. 2017 ರಲ್ಲಿ ನಡೆದ ರಾಜ್ಯ ಚುನಾವಣೆಯಲ್ಲಿ ಪಕ್ಷವು ಉತ್ತರ ಪ್ರದೇಶದ 403 ಕ್ಷೇತ್ರಗಳ ಪೈಕಿ ಕೇವಲ 7 ಕ್ನೇತ್ರಗಳನ್ನು ಗೆದ್ದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT